ಪಟಾಕಿ ನಿಷೇಧದ ಕುರಿತು ಮಹತ್ವದ ಆದೇಶ ಹೊರಡಿಸಿದ ಎನ್‌ಜಿಟಿ

ನವದೆಹಲಿ, ನ. ೦9: ಪಟಾಕಿ ನಿಷೇಧಕ್ಕೂ ಅನೇಕ ಚರ್ಚೆಗಳು ನಡೆಯುತ್ತಿದ್ದು, ಈ ವಷಯದ ಸಂಬಂಧವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಷ್ಟರಾಜಧಾನಿಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಎಲ್ಲಾ ರೀತಿಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಇಂದು ಮಧ್ಯರಾತ್ರಿಯಿಂದ ನವೆಂಬರ್‌ ೩೦೦ರವರೆಗೂ ಪಟಾಕಿಗಳಿಗೆ ನಿಷೇಧ ಹೇರಲಾಗಿದ್ದು, ದೆಹಲಿ ದೇಶದ ಯಾವಯಾವ ರಾಜ್ಯದಲ್ಲಿ ಅಥವಾ ನಗರಗಳಲ್ಲಿ ವಾಯುಮಾಲಿನ್ಯ ಹೆಚ್ಚಿದೆ ಅಂತಹ ನಗರಗಳಿಗೂ ಈ ನಿರ್ಬಂಧ ಅನ್ವಯವಾಗುತ್ತದೆ ಎಂದು ಉಲ್ಲೇಖಿಸಲಾಗಿದೆ. ಆದರೆ ಯಾವ ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗಿದ್ದು, ವಾಯು ಮಾಲಿನ್ಯ ಕಡಿಮೆ ಇರುವುದೋ ಅಂತಹ ನಗರಗಳಲ್ಲಿ ಪಟಾಕಿ ಮಾರಾಟ ಮಾಡಬಬಹುದೆಂಬುದಾಗಿ ಈ ಆದೇಶದಲ್ಲಿ ತಿಳಿಸಿದೆ.

ಇದರ ಅನ್ವಯ ಕರ್ನಾಟಕ ಸೇರಿ ಇತರೆ ನಗರ, ಪಟ್ಟಣಗಳಲ್ಲಿ ಹಸಿರು ಪಟಾಕಿ ಹಾಗೂ ಕೆಲ ಷರತ್ತುಗಳೊಂದಿಗೆ ಮಾರಾಟಕ್ಕೆ ಅನುಮತಿ ಸಿಕ್ಕಿದೆ. ಅಲ್ಲದೇ ಹಬ್ಬದ ವೇಳೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ  ಅಂದರೆ ಎರಡು ಗಂಟೆಗಲ ಕಾಲ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.

Exit mobile version