English English Kannada Kannada

ಕರೋನ ಕಾರಣದಿಂದ 10 ಲಕ್ಷ ಮಕ್ಕಳು ಶಾಲೆ ತೊರೆದಿದ್ದಾರೆ : ಬಿಹಾರ

Share on facebook
Share on google
Share on twitter
Share on linkedin
Share on print

ಪಟನಾ,ಫೆ.20: ಕೋವಿಡ್‌-19 ರ ಲಾಕ್ ಡೌನ್ ನಿಂದಾಗಿ ಬಿಹಾರ ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 10 ಲಕ್ಷ ಮಕ್ಕಳು ಶಾಲೆ ತೊರೆದಿದ್ದಾರೆ ಎಂದು ಅಧಿಕೃತ ಅಂಕಿ-ಅಂಶಗಳ ಮೂಲಕ ತಿಳಿದು ಬಂದಿದೆ. ಸರ್ಕಾರಿ ಶಾಲೆಗಳಲ್ಲಿ 5ರಿಂದ 6ನೇ ತರಗತಿಗೆ ದಾಖಲಾದ 6 ಲಕ್ಷ ಮಕ್ಕಳು ಶಾಲೆ ತೊರೆದರೆ, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಲ್ಲಿ  4 ಲಕ್ಷ ಮಕ್ಕಳು ಶಾಲೆ ತೊರೆದಿದ್ದಾರೆ ಎನ್ನಲಾಗಿದೆ.

ಹಾಗೇ ಶಾಲೆ ಬಿಟ್ಟ ಈ ವಿದ್ಯಾರ್ಥಿಗಳನ್ನು ಮತ್ತೆ ತರಗತಿಗಳಿಗೆ ಕರೆತರುವ ಉದ್ದೇಶದಿಂದ ಏಪ್ರಿಲ್ 1ರಿಂದ ರಾಜ್ಯಾದ್ಯಂತ ‘ಅಡ್ಮಿಷನ್ ಡ್ರೈವ್’ ಆರಂಭಿಸಲು ಬಿಹಾರ ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ರಂಜಿತ್ ಕೆ ಸಿಂಗ್, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ವಿಶೇಷ ಅಭಿಯಾನ ಏಪ್ರಿಲ್ ನಿಂದ ನಡೆಯಲಿದೆ ಎಂದು  ಖಾಸಗಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ದಿಂದ ಪ್ರೌಢ ಶಾಲೆ ಹಂತದ ಶಾಲಾ ಮುಖ್ಯೋಪಾಧ್ಯಾಯರಿಗೆ, ವಿದ್ಯಾರ್ಥಿಗಳು ಶಾಲೆ ಬಿಡುವುದನ್ನು ಕಡಿಮೆ ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಪ್ರವೇಶವನ್ನು ಮತ್ತೆ ಮಾಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.

Submit Your Article