Visit Channel

Patrol Rate: ಸತತ ಮೂರನೇ ದಿನವೂ ಏರಿಕೆ ಕಂಡ ತೈಲೋತ್ಪನ್ನಗಳ ದರ

768-512-11658575-826-11658575-1620277953851

ನವದೆಹಲಿ, ಮೇ. 12:  ದೇಶದಲ್ಲಿ ಸತತ ಮೂರನೇ ದಿನ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಇಂದು ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಡೀಸೆಲ್ ದರದಲ್ಲಿ 27 ಪೈಸೆ ಏರಿಕೆಯಾಗಿದೆ.

ಇಂದು ಕೂಡ ಮತ್ತೆ ದೇಶದಲ್ಲಿ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ 25 ಪೈಸೆ ಮತ್ತು ಡೀಸೆಲ್ ದರ 27 ಪೈಸೆಯಷ್ಟು ಏರಿಕೆಯಾಗಿದೆ. ಆ ಮೂಲಕ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 92.05 ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 82.61ರೂಗೆ ಏರಿಕೆಯಾಗಿದೆ.

ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.36ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ 89.75ರೂ. ಗೆ ಏರಿಕೆಯಾಗಿದೆ. ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಮೊದಲ ಬಾರಿಗೆ ಪೆಟ್ರೋಲ್ ದರ 100 ರೂ ಗಡಿ ದಾಟಿದ್ದು, ಇಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.08ರೂ ಗೆ ಏರಿಕೆಯಾಗಿದೆ. ಅಂತೆಯೇ ಡೀಸೆಲ್ ದರ 90.05ರೂ ಗೆ ಏರಿಕೆಯಾಗಿದೆ. ಆ ಮೂಲಕ ಪೆಟ್ರೋಲ್ ದರ 100ರೂ ಗಡಿ ದಾಟಿದ ದೇಶದ ರಾಜಧಾನಿ ಎಂಬ ಕುಖ್ಯಾತಿಗೆ ಭೋಪಾಲ್ ಪಾತ್ರವಾದಂತಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 26 ಪೈಸೆ ಏರಿಕೆಯಾಗಿದ್ದು, ಆ ಮೂಲಕ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 95.17ಕ್ಕೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 27 ಪೈಸೆ ಏರಿಕೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 87.63 ರೂಗೆ ಏರಿಕೆಯಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.