ಪೆಗಾಸಿಸ್ ಕದ್ದಾಲಿಕೆ ಪ್ರಕರಣ: ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರಿಂದ ಧರಣಿ

ಬೆಂಗಳೂರು, ಜು. 22: ರಾಷ್ಟ್ರಮಟ್ಟದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಹಾಗೂ ಪ್ರತಿಪಕ್ಷವಳ ಕಂಗಣ್ಣಿಗೆ ಗುರಿಯಾಗಿರುವ ಟೆಲಿಫೋನ್ ಕದ್ದಾಲಿಕೆಯನ್ನು ಖಂಡಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಆರೋಪ ಮುಂದಿಟ್ಟುಕೊಂಡು ಸಂವಿಧಾನ ಬಾಹಿರ ಬಿಜೆಪಿಗೆ ಧಿಕ್ಕಾರ, ಮೋದಿಗೆ ಧಿಕ್ಕಾರ ಎಂದು ಘೋಷಣೆ ಕೂಗಿಬ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಇದೇ ವೇಳೆ ದೇಶದಲ್ಲಿ ಪೆಟ್ರೋಲ್ ಡೀಸೆಲ್ ದರ ವಿಪರೀತವಾಗಿ ಏರಿಕೆ ಆಗುತ್ತಿದೆ. ದಿನದಿಂದ ದಿನಕ್ಕೆ ಬೆಲೆ ಏರಿಕೆ ಆದರೂ ಅದನ್ನು ನಿಯಂತ್ರಣ ಮಾಡಲು ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಕೈನಾಯಕರು ರಾಜಭವನ ಚಲೋ ನಡೆಸಿದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ರಾಜಭವನದ ಸುತ್ತಮುತ್ತಲು ಪೊಲೀಸ್ ಪಹರೆ ಹಾಕಲಾಗಿತ್ತು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಶಾಸಕರು, ಪ್ರಮುಖ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Exit mobile version