ಚಿಕ್ಕಮಗಳೂರಿನಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಭೇಟಿ

Chikkamangaluru: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ಕುಟುಂಬ (people sick after eating biryani) ಸಮಾರಂಭದಲ್ಲಿ ಬಿರಿಯಾನಿ

(Biriyani) ಸೇವಿಸಿದ 17 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಸ್ವಸ್ಥರಾದವರು ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಸ್.ಎನ್.ಉಮೇಶ್

(Dr.S.N.Umesh) ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ.

ಬಿರಿಯಾನಿ ತಿಂದು ಆಸ್ಪತ್ರೆ ಸೇರಿದ ಗ್ರಾಮಸ್ಥರು
ಮನೆಯ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು. ಬಿರಿಯಾನಿ ಸೇವಿಸಿದವರಿಗೆ ಭೇದಿ, ವಾಂತಿ ಕಾಣಿಸಿಕೊಂಡಿದ್ದು 17 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನ

ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆ (Hospital) ಆಡಳಿತಾಧಿಕಾರಿ ಡಾ.ಎಸ್.ಎನ್.ಉಮೇಶ್ (people sick after eating biryani) ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ.

ಆಸ್ಪತ್ರೆಯ ಮೂರು ಕೊಠಡಿಗಳಲ್ಲಿ ಅಸ್ವಸ್ಥರನ್ನು ದಾಖಲಿಸಲಾಗಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅಸ್ವಸ್ಥರಲ್ಲಿ ಒಂಬತ್ತು ಮಂದಿ ಮಹಿಳೆಯರಿದ್ದಾರೆ.

ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.

ಬೆಂಗಳೂರು ವಿವಿ ಹಾಸ್ಟೆಲ್​​ ಊಟದಲ್ಲಿ ಹುಳುಗಳು ಪತ್ತೆ
ಇನ್ನು ಮತ್ತೊಂದೆಡೆ ಬೆಂಗಳೂರು ವಿವಿ ಹಾಸ್ಟೆಲ್​​ (VV Hostel) ಊಟದಲ್ಲಿ ಹುಳುಗಳು ಪತ್ತೆಯಾಗಿದ್ದು ಹಾಸ್ಟೆಲ್​ ವಾರ್ಡನ್​ (Warden) ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಕಳಪೆ ಆಹಾರ ನೀಡಲಾಗುತ್ತಿದೆ. ಇದನ್ನು ಪ್ರಶ್ನೆ ಮಾಡಿದರೆ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾರೆ. ಕಳಪೆ ಆಹಾರ ತಿಂದು ಆರೋಗ್ಯಕ್ಕೆ ಸಮಸ್ಯೆಯಾದರೆ ಯಾರು ಹೊಣೆ. ಕೂಡಲೇ ವಾರ್ಡನ್​

ಅಮಾನತುಗೊಳಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಇದನ್ನು ಓದಿ: ಮುರುಘಾ ಶ್ರೀಗೆ ಮತ್ತೆ ಬಂಧನದ ಭೀತಿ: ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಸಂಕಷ್ಟ

Exit mobile version