Bengaluru : ಬೆಂಗಳೂರಿನ ನಾಗವಾರದ ಮೆಟ್ರೋ ಪಿಲ್ಲರ್ ಕುಸಿತದಲ್ಲಿ(percentage commision Government) ಇಬ್ಬರು ಸಾವನ್ನಪ್ಪಿದ್ದು, ಈ ದುರ್ಘಟನೆ ಇದೀಗ ರಾಜಕೀಯ ತಿರುವನ್ನು ಪಡೆದುಕೊಂಡಿದೆ!
ರಾಜ್ಯ ಬಿಜೆಪಿ ಸರ್ಕಾರದ ಆಡಳಿತದಲ್ಲಿರುವ ಭ್ರಷ್ಟಾಚಾರ ಮತ್ತು 40% ಕಮಿಷನ್ ದಂದೆಯಿಂದಲೇ ಈ ಘಟನೆ ಸಂಭವಿಸಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್(DK Shiva kumar) ಆರೋಪಿಸಿದ್ದಾರೆ.

ಈ ದುರ್ಘಟನೆ ಸಂಭವಿಸಿದ ಕೂಡಲೇ ಘಟನೆ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ(Basavaraj bommai) ಅವರು,
ನಾಗವಾರದ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರನ್ನು ಬಲಿ ತೆಗೆದುಕೊಂಡಿದೆ ಮತ್ತು ಒಬ್ಬರಿಗೆ ಗಂಭೀರ ಗಾಯವಾಗಿದೆ.
ಇದು ಅತ್ಯಂತ ದುರದೃಷ್ಟಕರ. ಗುತ್ತಿಗೆದಾರನನ್ನು ಬಂಧಿಸಿ ಘಟನೆಯ ತನಿಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಮತ್ತು ಈಗಾಗಲೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.
ಸಿಎಂ ಬೊಮ್ಮಾಯಿ ಅವರ ಹೇಳಿಕೆಯ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ದೂಷಿಸಿರುವ ಡಿ.ಕೆ ಶಿವಕುಮಾರ್, ಬಿಜೆಪಿ ಆಡಳಿತಾವಧಿಯಲ್ಲಿ ಸಂಭವಿಸಿದ ಅಪಘಾತಗಳ ಬಗ್ಗೆ ತನಿಖೆ ಆಗಬೇಕು.

ನಿರ್ಮಾಣ ಹಂತದಲ್ಲಿದ್ದ ನಾಗವಾರ ಮೆಟ್ರೋ ಪಿಲ್ಲರ್ ಕುಸಿದು ಮಹಿಳೆ ಮತ್ತು ಆಕೆಯ ಮಗ ಸಾವನ್ನಪ್ಪಿದ್ದಾರೆ ಮತ್ತು ಆಕೆಯ ಪತಿಗೆ ಗಂಭೀರ ಗಾಯವಾಗಿದೆ.
ಇದು 40% ಪರ್ಸೆಂಟ್ ಕಮಿಷನ್ ಸರ್ಕಾರದ ಫಲಿತಾಂಶವಾಗಿದೆ! ಭ್ರಷ್ಟಾಚಾರವೇ ಈ ಭಾರೀ ಅಪಘಾತಕ್ಕೆ ಮೂಲ ಕಾರಣವಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಪಕ್ಷದವರು 40% ಪ್ರತಿಶತ ಕಮಿಷನ್ ತೆಗೆದುಕೊಳ್ಳುವಾಗ, ನೀವು ಯಾವ ಗುಣಮಟ್ಟವನ್ನು ನಿರೀಕ್ಷಿಸಲು ಸಾದ್ಯ?
ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಇಲ್ಲ ಎಂದು ಡಿ.ಕೆ ಶಿವಕುಮಾರ್ ರಾಜ್ಯ ಬಿಜೆಪಿ ಸರ್ಕಾರದ(percentage commision Government) ವಿರುದ್ಧ ಕಿಡಿಕಾರಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಹಣ ಘೋಷಿಸಿದ್ದು, ಬೆಂಗಳೂರು ನಗರದ ನಮ್ಮ ಮೆಟ್ರೋ ಕೂಡ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ಹಣವನ್ನು ಘೋಷಿಸಿದೆ.
ಮಂಗಳವಾರ, ಬೆಂಗಳೂರಿನ ನಾಗವಾರ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ನಮ್ಮ ಮೆಟ್ರೋ ನಿಲ್ದಾಣದ ಪಿಲ್ಲರ್ ಕುಸಿದು ಮಹಿಳೆ ಮತ್ತು ಅವರ ಎರಡೂವರೆ ವರ್ಷ ವಯಸ್ಸಿನ ಮಗು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರ ಅಂತ್ಯಕ್ರಿಯೆಯು ಇಂದು ದಾವಣಗೆರೆಯಲ್ಲಿ ನಡೆಯಲಿದೆ. ಮಹಿಳೆಯ ಪತಿ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.