ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಕೊಲೆಗೆ ಯತ್ನ ನಡೆಸಿದ ದುಷ್ಕರ್ಮಿಗಳು: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಶಶಿಕುಮಾರ್

ಬೆಂಗಳೂರು, ಜು. 30: ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಸಂಘಟನೆ(ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತೊಡೆ ಹಾಗೂ ಕೈಗೆ ಗಾಯಗಳಾಗಿದೆ. ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಕಾರಿನಿಂದ ಇಳಿಯುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ನಾಲ್ವರು ದುಷ್ಕರ್ಮಿಗಳು ಲಾಂಗ್ ಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ.

ಕೂಡಲೇ ಎಚ್ಚೆತ್ತ ಶಶಿಕುಮಾರ್ ಸ್ವಯಂ ರಕ್ಷಣೆಗಾಗಿ ಕಾರಿನಲ್ಲಿ ಇಟ್ಟುಕೊಂಡಿದ್ದ ಪಿಸ್ತೂಲ್ ತೆಗೆದುಕೊಂಡಿದ್ದು, ಕೂಡಲೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆ ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ
ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಮುಂದಿನ ತನಿಖೆ ಆರಂಭಿಸಿದ್ದಾರೆ.

Exit mobile version