ಝೈಡಸ್ ಕ್ಯಾಡಿಲಾ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಕೋರಿ ಅರ್ಜಿ

ನವದೆಹಲಿ, ಜು. 01: ಭಾರತದ ಔಷಧ ಉತ್ಪಾದಕ ಕಂಪನಿ ಝೈಡಸ್ ಕ್ಯಾಡಿಲಾ, ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಕೋರಿ ಡಿಸಿಜಿಐಗೆ ಅರ್ಜಿ ಸಲ್ಲಿಸಿದೆ.

ಝೈಡಸ್ ಕಂಪನಿಯ ಕೋವಿಡ್ ಲಸಿಕೆ, ಝೈಕೋವ್-ಡಿಗೆ ಅನುಮೋದನೆ ಸಿಕ್ಕರೆ ಮಾಡರ್ನಾ, ಅಸ್ಟ್ರಾಜೆನೆಕಾ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್, ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಮತ್ತು ರಷ್ಯಾದ ಗಮಲೇಯ ಇನ್‌ಸ್ಟಿಟ್ಯೂಟ್‌ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ವಿ ನಂತರ ಭಾರತದಲ್ಲಿ ಬಳಕೆಗೆ ಅನುಮೋದನೆ ಪಡೆದ ಐದನೇ ಲಸಿಕೆಯಾಗಲಿದೆ.

ಭಾರತದಲ್ಲಿ ಕೋವಿಡ್ -19 ಎರಡನೇ ಅಲೆಯು ಉತ್ತುಂಗದಲ್ಲಿದ್ದಾಗ ಲಸಿಕೆಯ ಪ್ರಯೋಗ ನಡೆಸಲಾಗಿದ್ದು, ಹೊಸ ರೂಪಾಂತರಿ ತಳಿಗಳ ವಿರುದ್ಧ ಅದರಲ್ಲೂ ವಿಶೇಷವಾಗಿ ಡೆಲ್ಟಾ ರೂಪಾಂತರದ ವಿರುದ್ಧ ಲಸಿಕೆಯ ಲಸಿಕೆ ಪರಿಣಾಮಕಾರಿಯಾಗಿದೆ’ಎಂದು ಝೈಡಸ್ ಕಂಪನಿ ಷೇರು ವಿನಿಮಯ ಕೇಂದ್ರಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದೆ.

Exit mobile version