- ವಕ್ಫ್ ಕಾಯ್ದೆ ಜಾರಿಗೊಳಿಸಿದ (petitions on waqf bill)ಕೇಂದ್ರ ಸರ್ಕಾರ
- ಭಾರತದಲ್ಲಿ ಹೊಸ ವಕ್ಫ್ ಕಾನೂನು ಜಾರಿಗೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
- ಮುಂದಿನ ವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳ ವಿಚಾರಣೆ
New Delhi: ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ಪ್ರಶ್ನಿಸುವ ಹಲವಾರು (petitions on waqf bill) ಅರ್ಜಿಗಳನ್ನು ಏಪ್ರಿಲ್ 16 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ್ದು, ಅದರಲ್ಲಿ ತನ್ನ ವಾದವನ್ನು ಆಲಿಸದೆ ಯಾವುದೇ ಆದೇಶಗಳನ್ನು ಹೊರಡಿಸಬಾರದು ಎಂದು ಹೇಳಿದೆ.

ಈ ಮಧ್ಯೆ ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕೇವಿಯಟ್ ಸಲ್ಲಿಸಿದ್ದು, ವಕ್ಫ್ ಕಾಯ್ದೆ ವಿಚಾರದಲ್ಲಿ (petitions on waqf bill) ಯಾವುದೇ ಆದೇಶ ಹೊರಡಿಸುವ ಮುನ್ನ ವಿಚಾರಣೆ ನಡೆಸುವಂತೆ ಕೋರಿದೆ.
ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಯಾವುದೇ ಅರ್ಜಿಯ ಬಗ್ಗೆ ವಿಚಾರಣೆ ಮಾಡದೇ ಯಾವುದೇ ಆದೇಶ ಹೊರಡಿಸದಂತೆ ನೋಡಿಕೊಳ್ಳಲು ಕೇವಿಯಟ್ ಅನ್ನು ಸಲ್ಲಿಸಲಾಗುತ್ತದೆ. ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಕಾಯ್ದೆಗೆ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ಸಹಿ ಹಾಕಿದ್ದು, ಕೂಡಲೇ ಹೊಸ ಕಾಯ್ದೆ ಜಾರಿಗೆ ಬರಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಇಂದು ಅಧಿಸೂಚನೆ ಹೊರಡಿಸಿದೆ.
ಹೊಸದಾಗಿ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ರಾಜಕಾರಣಿಗಳು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (All India Muslim Personal Law Board) ಮತ್ತು ಜಮಿಯತ್ ಉಲಮಾ-ಇ-ಹಿಂದ್ ಸೇರಿದಂತೆ 10ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿವೆ.
ಈ ಬೆಳವಣಿಗೆ ಬಗ್ಗೆ ಮಾಹಿತಿ ಹೊಂದಿರುವ ವಕೀಲರು, ಅರ್ಜಿಗಳನ್ನು ಏಪ್ರಿಲ್ 16ರಂದು ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಏಪ್ರಿಲ್ 7ರಂದು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಜಮಿಯತ್ ಉಲಮಾ-ಇ-ಹಿಂದ್ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ (Kapil Sibal) ಅವರಿಗೆ ಅರ್ಜಿಗಳನ್ನು ಪಟ್ಟಿ ಮಾಡುವುದನ್ನು ಪರಿಗಣಿಸುವುದಾಗಿ ಭರವಸೆ ನೀಡಿತ್ತು. ಕನಿಷ್ಠ ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಪಾಲಿಸಿದ ವ್ಯಕ್ತಿಗಳು ಮಾತ್ರ ವಕ್ಫ್‌ಗೆ ಆಸ್ತಿಗಳನ್ನು ದಾನ ಮಾಡಬಹುದು ಎನ್ನುವ ಷರತ್ತು ಕೂಡ ಕಾಯ್ದೆಯಲ್ಲಿದೆ.
ಇದನ್ನು ಓದಿ : ಆನ್ಲೈನ್ ಬೆಟ್ಟಿಂಗ್, ಗೇಮಿಂಗ್ ಆ್ಯಪ್ಗೆ ಶೀಘ್ರವೇ ಹೊಸ ಮಾನದಂಡ:ಪ್ರಿಯಾಂಕ್ ಖರ್ಗೆ
ಅಲ್ಲದೆ, ಪ್ರಸ್ತಾವಿತ ಕಾನೂನಿನಡಿಯಲ್ಲಿ, ವಕ್ಫ್ ಎಂದು ಗುರುತಿಸಲಾದ ಸರ್ಕಾರಿ ಆಸ್ತಿಯು ಅದಕ್ಕೆ ಸೇರಿರುವುದಿಲ್ಲ ಮತ್ತು ಸ್ಥಳೀಯ ಕಲೆಕ್ಟರ್ ಅದರ ಮಾಲೀಕತ್ವವನ್ನು ನಿರ್ಧರಿಸಲಿದ್ದಾರೆ.ಹಲವು ತಜ್ಞರ ಜೊತೆ ಚರ್ಚೆ ನಡೆಸಿದ ಬಳಿಕ ವಕ್ಫ್ ಕಾಯ್ದೆಯನ್ನು ರೂಪಿಸಲಾಗಿದೆ. ಇದು ಕಾನೂನು ಆಸ್ತಿ ಮತ್ತು ಅದರ ನಿರ್ವಹಣೆಗೆ ಸಂಬಂಧಿಸಿದೆ, ಧರ್ಮವನ್ನು ಆಧರಿಸಿಲ್ಲ ಎಂದು ಸರ್ಕಾರ ಪದೇ ಪದೇ ಹೇಳಿದೆ. ಈ ಕಾಯ್ದೆಗೆ ಮುಸ್ಲಿಮೇತರ ಅಲ್ಪಸಂಖ್ಯಾತರ ಬೆಂಬಲ ಸಿಕ್ಕಿದೆ ಎಂದು ಬಿಜೆಪಿ ಹೇಳಿದೆ.