ಶೀಘ್ರದಲ್ಲಿ ಪೆಟ್ರೋಲ್‌ ಬೆಲೆ 150 ?

ನವದೆಹಲಿ ಅ 28 ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನದತ್ತ ಏರುತ್ತಲೇ ಇದೆ. ಇದರಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಜನಸಾಮಾನ್ಯರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಗೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ಈಗ ಪ್ರಸಿದ್ಧ ಜಾಗತಿಕ ಹಣಕಾಸು ಕಂಪನಿ ಗೋಲ್ಡ್‌ಮನ್ ಸ್ಯಾಚ್ಸ್ ಮುಂಬರುವ ಸಮಯದಲ್ಲಿ, ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 150 ರೂ. ತಲುಪಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

 ಮುಂದಿನ ವರ್ಷದ ವೇಳೆಗೆ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ $ 110 ಕ್ಕೆ ಏರಬಹುದು ಎಂದು ಗೋಲ್ಡ್‌ಮನ್ ಸ್ಯಾಚ್ಸ್ ಇತ್ತೀಚಿನ ಟಿಪ್ಪಣಿಯಲ್ಲಿ ಹೇಳಿದೆ. ಪ್ರಸ್ತುತ, ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ $ 85 ರಷ್ಟಿದೆ. ಹೀಗಾಗಿ, ಬ್ರೆಂಟ್ ಕಚ್ಚಾ ತೈಲದ ಬೆಲೆಗಳು ಈಗಿನ ಬೆಲೆಗೆ ಹೋಲಿಸಿದರೆ ಮುಂದಿನ ವರ್ಷದ ವೇಳೆಗೆ ಶೇ.30 ರಷ್ಟು ಹೆಚ್ಚಾಗಬಹುದು. ಜಾಗತಿಕ ಬೇಡಿಕೆ-ಪೂರೈಕೆಯು ಅಸಮತೋಲನಗೊಂಡಿದೆ ಎಂದು ಗೋಲ್ಡ್‌ಮನ್ ಸ್ಯಾಚ್ಸ್‌ನ ತೈಲ ವಿಶ್ಲೇಷಕರು ಹೇಳುತ್ತಾರೆ. ಈ ಸಮಯದಲ್ಲಿ ಕಚ್ಚಾ ಬೇಡಿಕೆಯು ಕೋವಿಡ್ ಪೂರ್ವದ ಮಟ್ಟವನ್ನು ತಲುಪಿದೆ. ಇದರಿಂದ ಮುಂದಿನ ವರ್ಷ ಕಚ್ಚಾತೈಲ ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ.

 ಕಚ್ಚಾ ತೈಲ ಬೆಲೆಯ ಹೆಚ್ಚಳವು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಗೋಲ್ಡ್‌ಮನ್ ಸ್ಯಾಚ್ಸ್ ಹೇಳುವಂತೆ ಕಚ್ಚಾ ತೈಲ ಬೆಲೆಯಲ್ಲಿ ಶೇಕಡಾ 30 ರಷ್ಟು ಹೆಚ್ಚಳವಾಗಿಲಿದೆ. ಶೇ 30ರಷ್ಟು ಹೆಚ್ಚಳವಾದರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 150 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 140 ರೂ. ಆಗಲಿದೆ.  ಪ್ರಸ್ತುತ, ರಾಜಧಾನಿ ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 107.94 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 96.97 ರೂ. ಆಗಿದೆ

 ಜಾಗತಿಕ ಕಚ್ಚಾ ಬೇಡಿಕೆಯು ದಿನಕ್ಕೆ 99 ಮಿಲಿಯನ್ ಬ್ಯಾರೆಲ್‌ಗಳನ್ನು ದಾಟಿದೆ ಎಂದು ಗೋಲ್ಡ್‌ಮನ್ ಸ್ಯಾಚ್ಸ್ ಅಂದಾಜಿಸಿದೆ. ಶೀಘ್ರದಲ್ಲೇ ಇದು ದಿನಕ್ಕೆ 100 ಮಿಲಿಯನ್ ಬ್ಯಾರೆಲ್‌ಗಳ ಪೂರ್ವ ಕೋವಿಡ್ ಮಟ್ಟವನ್ನು ದಾಟಬಹುದು. ಇದಕ್ಕೆ ಕಾರಣ ಏಷ್ಯಾದ ಬಹುತೇಕ ದೇಶಗಳು ಕೊರೊನಾ(Corona) ಡೆಲ್ಟಾ ರೂಪಾಂತರದಿಂದ ಚೇತರಿಸಿಕೊಳ್ಳುತ್ತಿವೆ.

 ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಪ್ರಕ್ರಿಯೆ ಮುಂದುವರೆದಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಭಾರತ್ ಪೆಟ್ರೋಲಿಯಂ ಅಕ್ಟೋಬರ್ 27 ಬುಧವಾರದಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 35-35 ಪೈಸೆಗಳಷ್ಟು ಹೆಚ್ಚಿಸಿವೆ. ಈ ಏರಿಕೆಯೊಂದಿಗೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.94 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 96.67 ರೂ ತಲುಪಿದೆ. ಅದೇ ಸಮಯದಲ್ಲಿ ಮುಂಬೈನಲ್ಲಿ ಪೆಟ್ರೋಲ್ ಲೀಟರ್‌ಗೆ 113.45 ರೂ ಮತ್ತು ಡೀಸೆಲ್ ಲೀಟರ್‌ಗೆ 104.75 ರೂ.ಇದೆ.

ಅಡುಗೆ ಅನಿಲವೂ ದುಬಾರಿ !

ಮುಂದಿನ ದಿನಗಳಲ್ಲಿ ಅಡುಗೆ ಅನಿಲ ದರ ಭಾರಿ ಏರಿಕೆಯಾಗುವ ಸಾಧ್ಯತೆಯಿದೆ. ಪ್ರಸ್ತುತ ತೈಲ ಕಂಪನಿಗಳು ಎಲ್‌ಪಿಜಿ ಪೂರ್ಣ ಪ್ರಮಾಣದ ದರ ಏರಿಕೆಯನ್ನು ತಡೆ ಹಿಡಿದಿದ್ದು, ಸರಕಾರದ ಅನುಮತಿಸಿದರೆ ನ.1ಕ್ಕೆ ಏರಿಕೆ ಪ್ರಕಟಿಸುವ ಸಾಧ್ಯತೆಯಿದೆ. ಈ ಏರಿಕೆಯೊಂದಿಗೆ ವರ್ಷದಲ್ಲಿ 5ನೇ ಬಾರಿ ಎಲ್‌ಪಿಜಿ ದರ ಹೆಚ್ಚಳವಾದಂತಾಗಲಿದೆ. ಕಳೆದ ಜುಲೈನಿಂದ ಗೃಹ ಬಳಕೆ ಸಿಲಿಂಡರ್‌ ದರ 90 ರೂ. ಹೆಚ್ಚಳವಾಗಿದ್ದು, 900 ರೂ. ದಾಟಿದೆ. ಸದ್ಯದಲ್ಲೇ 1,000ಗೆ ತಲುಪಿದರೆ ಅಚ್ಚರಿಯಿಲ್ಲ.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.