ಯುಗಾದಿ ಹಬ್ಬದ ಪ್ರಯುಕ್ತ ಇಂಧನ ಬೆಲೆಯಲ್ಲಿ ಮತ್ತೊಮ್ಮೆ ಏರಿಕೆಯ ಗಿಫ್ಟ್ ; 12 ದಿನದಲ್ಲಿ 7.20 ರೂ. ಹೆಚ್ಚಳ!

ಇಂದು ಯುಗಾದಿ ಹಬ್ಬವಿದ್ದರೂ ಕೂಡ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಹೌದು, ಇಂಧನ ಬೆಲೆಯಲ್ಲಿ 80 ಪೈಸೆ ಹೆಚ್ಚಳ ಮಾಡುವ ಮೂಲಕ ಯುಗಾದಿ ಹಬ್ಬಕ್ಕೆ ಜನಸಾಮಾನ್ಯರಿಗೆ ಉಡುಗೊರೆಯನ್ನು ಕೊಟ್ಟಿದ್ದಾರೆ. 21ನೇ ತಾರೀಖಿನ ದಿನದಿಂದ ಪ್ರಾರಂಭವಾದ ಇಂಧನ ಬೆಲೆ ಏರಿಕೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ. ಸತತವಾಗಿ ಪೆಟ್ರೋಲ್ ಮತ್ತು ಡೀಸೆಲ್ ಪೈಸೆ ಮೌಲ್ಯದಲ್ಲಿ ಹೆಚ್ಚಳವಾಗುತ್ತಲೆ ಇದೆ! ಇಂದು ಶನಿವಾರ ಏಪ್ರಿಲ್ 02 ರಂದು ಕೂಡ ದೆಹಲಿಯಲ್ಲಿ 80 ಪೈಸೆ ಹೆಚ್ಚಳವಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿಹಾಕಿದ್ದಾರೆ. ಇಂದಿಗೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 102.61 ರೂ. ಡೀಸೆಲ್ ಪ್ರತಿ ಲೀಟರ್ ಬೆಲೆ 93.87 ರೂ. ಏರಿಕೆ ಕಂಡಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆಯಲ್ಲಿ 80 ಪೈಸೆ ಹೆಚ್ಚಳ ಮತ್ತು ಡೀಸೆಲ್ ಬೆಲೆಯಲ್ಲಿ 78 ಪೈಸೆ ಹೆಚ್ಚಳಗೊಂಡಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 117.57 ರೂ. ಜೊತೆಗೆ ಡೀಸೆಲ್ ಬೆಲೆ 101.79 ರೂ. ಗರಿಷ್ಟ ಮಟ್ಟವನ್ನು ತಲುಪುತ್ತಿದೆ.

Latest News

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.

ರಾಜಕೀಯ

1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ : ಹೆಚ್‍ಡಿಕೆ

ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು.