ನವದೆಹಲಿ, ಡಿ. 18: ಪೆಟ್ರೊಲ್, ಡಿಸೇಲ್ ದರಗಳು ಅಂತರಾಷ್ಟ್ರೀಯ ಮಟ್ಟದಲ್ಲಿನ ಕ್ರೂಡ್ ಆಯಿಲ್ ದರದ ಮೇಲೆ ಅವಲಂಬಿತವಾಗಿರುತ್ತದೆ. ಪ್ರಸ್ತುತ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ದರವು ಗಣನೀಯವಾಗಿ ಕಡಿಮೆಯಾಗುತ್ತಿದೆ, ಇನ್ನೊಂದು ಕಡೆ ಜನರು ಕೊವಿಡ್ನಿಂದಾಗಿ ಆರ್ಥಿಕ ದುಸ್ಥಿತಿಯನ್ನು ಎದುರಿಸುತ್ತಿದ್ದಾರೆ ಇದ್ಯಾವುದನ್ನು ಪರಿಗಣಿಸದ ಕೇಂದ್ರ ಸರ್ಕಾರ ಡಿಸೆಂಬರ್ 2ರಿಂದ ಪೆಟ್ರೋಲ್, ಡಿಸೇಲ್ ದರವನ್ನು ಏರಿಸುತ್ತಿದೆ.
ನವೆಂಬರ್ 20 ರಿಂದ 29ರವರೆಗೆ ನಿರಂತರವಾಗಿ ಪೆಟ್ರೊಲ್ ಡಿಸೇಲ್ ದರಗಳನ್ನು ಏರಿಸಲಾಗಿದೆ. ಡಿಸೆಂಬರ್ 7 ರಂದು ಕೂಡ ಪೆಟ್ರೊಲ್ ಹಾಗೂ ಡಿಸೇಲ್ ದರವನ್ನು ಏರಿಸಲಾಗಿತ್ತು. ನವೆಂಬರ್ 27 ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 19 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 24 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 28ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 27 ಪೈಸೆ ಏರಿಕೆ ಮಾಡಲಾಗಿತ್ತು. ನವೆಂಬರ್ 29ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 21 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿತ್ತು.
ಡಿಸೆಂಬರ್ 2ರಂದು ಪ್ರತಿ ಲೀಟರ್ ಮೇಲೆ 15 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಿಸಲಾಗಿತ್ತು. ಡಿಸೆಂಬರ್ 3ರಂದು ಪ್ರತಿ ಲೀಟರ್ ಮೇಲೆ 17ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 19 ಪೈಸೆ ಏರಿಸಲಾಗಿತ್ತು. ಡಿಸೆಂಬರ್ 4ರಂದು ಪ್ರತಿ ಲೀಟರ್ ಮೇಲೆ 20 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 23 ಪೈಸೆ ಹೆಚ್ಚಳ ಮಾಡಲಾಗಿತ್ತು. ಡಿಸೆಂಬರ್ 5ರಂದು ಪ್ರತಿ ಲೀಟರ್ ಮೇಲೆ 27 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 25 ಪೈಸೆ ಏರಿಸಲಾಗಿತ್ತು. ಡಿಸೆಂಬರ್ 6ರಂದು ಪ್ರತಿ ಲೀಟರ್ ಮೇಲೆ 28 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಏರಿಸಲಾಗಿತ್ತು. ಆದರೆ ಕಳೆದ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.
ಕಳೆದ 10 ದಿನಗಳಿಂದ ಪೆಟ್ರೊಲ್, ಡಿಸೇಲ್ ದರ ಯಥಾಸ್ಥಿತಿ ಕಾಯ್ದುಕೋಂಡಿದೆ.
ಇಂದು ವಿವಿಧ ನಗರಗಳಲ್ಲಿ ಪೆಟ್ರೊಲ್, ಡಿಸೇಲ್ ದರ ಇಂತಿದೆ: ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 83.71 ಪೈಸೆ, ಡೀಸೆಲ್ ಬೆಲೆ 73.87 ಪೈಸೆ ಇದೆ, ಮುಂಬೈನಲ್ಲಿ ಪೆಟ್ರೋಲ್ ಬೆಲೆ 90.34 ಪೈಸೆ ಇದ್ದರೆ, ಡೀಸೆಲ್ ಬೆಲೆ 80.51 ಪೈಸೆ ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 86.51 ಪೈಸೆ ಇದ್ದರೆ, ಡೀಸೆಲ್ ಬೆಲೆ 79.21 ಪೈಸೆ ಇದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 85.19 ಪೈಸೆ ಇದ್ದರೆ, ಡೀಸೆಲ್ ಬೆಲೆ 77.44 ಪೈಸೆ ಇದೆ. ಬೆಂಗಳೂರಿನಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.51 ಪೈಸೆ ಇದೆ.