ನವದೆಹಲಿ, ಡಿ. 12: ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡಿಲ್ಲ. ಆದರೂ ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರವು ಹೆಚ್ಚಾಗಿಯೇ ಇದೆ. ಇನ್ನು ಹಲವು ರಾಜ್ಯಗಳಲ್ಲಿ ಲೀಟರ್ ಪೆಟ್ರೊಲ್ ದರ 90 ರೂ. ಅಸುಪಾಸು ಆಗಿದೆ.
ಎಲ್ಲೆಲ್ಲಿ ಎಷ್ಟೆಷ್ಟು?
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ 86.51 ರೂ ಆದರೆ ಡೀಸಲ್ ದರ 78.31 ರೂ ಆಗಿದೆ. ಇನ್ನು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 83.71 ರೂ, ಡೀಸೆಲ್ ದರ 73.87 ರೂ, ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್ಗೆ 85.19 ರೂ. ಮತ್ತು ಡೀಸೆಲ್ ದರ 77.44 ರೂ ಆಗಿದೆ.
ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ಗೆ 90.34 ರೂ. ಮತ್ತು ಡೀಸೆಲ್ ದರ 80.51 ರೂ, ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್ಗೆ 86.61 ರೂ. ಮತ್ತು ಡೀಸೆಲ್ ದರ 79.21 ರೂ, ಹೈದ್ರಾಬಾದ್ನಲ್ಲಿ ಪೆಟ್ರೋಲ್ ದರ ಲೀಟರ್ಗೆ 87.06 ರೂ. ಮತ್ತು ಡೀಸೆಲ್ ದರ 80.60 ರೂ, ಆಗಿದೆ.
ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರವು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.