Petrol Price Today: ನಿನ್ನೆಗಿಂತ ಇಂದು ಪೆಟ್ರೋಲ್ ಬೆಲೆ ಹೆಚ್ಚಳ

ಬೆಂಗಳೂರು, ಜ. 28: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್‌ ಆಯಿಲ್‌ನಲ್ಲಿ ಏರಿಳಿತಗಳಿಂದಾಗಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರವೆಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಜೈಪುರದಲ್ಲಿ ಪೆಟ್ರೋಲ್ ದರ 1 ಲೀಟರ್​ಗೆ 93 ರೂ. ದಾಟಿದೆ. ಹಾಗೆಯೇ, ಬೆಂಗಳೂರು, ಚೆನ್ನೈ, ಪಾಟ್ನಾ, ಭುವನೇಶ್ವರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 89 ರೂ. ಆಸುಪಾಸಿನಲ್ಲಿದೆ. ಬಹುತೇಕ ಎಲ್ಲ ನಗರಗಳಲ್ಲೂ ನಿನ್ನೆಗಿಂತ ಇಂದು ಪೆಟ್ರೋಲ್ ಬೆಲೆ ಹೆಚ್ಚಾಗಿದೆ.

ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.30 ರೂ. ಇದೆ. ಮುಂಬೈನಲ್ಲಿ 92.86 ರೂ, ಜೈಪುರದಲ್ಲಿ 93.49 ರೂ, ಬೆಂಗಳೂರಿನಲ್ಲಿ 89.21 ರೂ, ಹೈದರಾಬಾದ್​ನಲ್ಲಿ 89.77 ರೂ, ತಿರುವನಂತಪುರದಲ್ಲಿ 87.58 ರೂ, ಚೆನ್ನೈನಲ್ಲಿ 88.82 ರೂ ಆದರೆ ಕೊಲ್ಕತ್ತಾದಲ್ಲಿ 87.69 ರೂ. ಆಗಿದೆ.

ಭಾರತದಲ್ಲಿ ಡೀಸೆಲ್ ಬೆಲೆಯಲ್ಲೂ ಏರಿಕೆಯಾಗುತ್ತಲೇ ಇದ್ದು, ಜೈಪುರದಲ್ಲಿ 1 ಲೀಟರ್ ಡೀಸೆಲ್ ಬೆಲೆ 85 ರೂ. ದಾಟಿದೆ. ಚೆನ್ನೈ, ಮುಂಬೈ, ಹೈದರಾಬಾದ್, ಭುವನೇಶ್ವರದಲ್ಲಿ 1 ಲೀಟರ್ ಡೀಸೆಲ್ ಬೆಲೆ 83 ರೂ. ದಾಟಿದೆ. ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್​ಗೆ 76.48 ರೂ. ಇದೆ. ಚೆನ್ನೈನಲ್ಲಿ 81.71 ರೂ, ಮುಂಬೈನಲ್ಲಿ 83.30 ರೂ, ಬೆಂಗಳೂರಿನಲ್ಲಿ 81.10 ರೂ, ಹೈದರಾಬಾದ್​ನಲ್ಲಿ 83.46 ರೂ. ಇದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಆಗುತ್ತಿದ್ದರೂ, ಕೊರೊನಾ ಕಾರಣಗಳಿಂದ ಜನಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಲೆಕ್ಕಿಸದ ಸರ್ಕಾರಿ ಒಡೆತನದ ತೈಲ ಕಂಪನಿಗಳು ಸತತವಾಗಿ ಬೆಲೆ ಏರಿಕೆಯಲ್ಲಿ ನಿರತವಾಗಿವೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಇದೇ ರೀತಿ ಇಂಧನದ ಬೆಲೆ ಏರಿಕೆ ಮುಂದುವರೆದರೆ 1 ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೆಂಚುರಿ ಬಾರಿಸುವ ದಿನವೂ ದೂರವೇನಿಲ್ಲ.

Exit mobile version