ಬೆಂಗಳೂರು, ಫೆ. 01: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ನಿನ್ನೆಗಿಂತ ಇಂದು ಪೆಟ್ರೋಲ್ ಬೆಲೆಯಲ್ಲಿ ಹೆಚ್ಚೇನೂ ಬದಲಾವಣೆಯಾಗಿಲ್ಲ. ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರವೆಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಜೈಪುರದಲ್ಲಿ ಪೆಟ್ರೋಲ್ ದರ ನಿನ್ನೆಗಿಂತ 1 ರೂ. ಹೆಚ್ಚಾಗಿದೆ. ಹಾಗೇ, ಬೆಂಗಳೂರು, ಚೆನ್ನೈ, ಪಾಟ್ನಾ, ಭುವನೇಶ್ವರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 89 ರೂ. ಆಸುಪಾಸಿನಲ್ಲಿದೆ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.21 ರೂ. ಇದೆ. ಮುಂಬೈನಲ್ಲಿ 92.86 ರೂ, ಜೈಪುರದಲ್ಲಿ 93.34 ರೂ, ಬೆಂಗಳೂರಿನಲ್ಲಿ 89.21 ರೂ, ಹೈದರಾಬಾದ್ನಲ್ಲಿ 89.77 ರೂ, ತಿರುವನಂತಪುರದಲ್ಲಿ 88.33 ರೂ, ಚೆನ್ನೈನಲ್ಲಿ 88.82 ರೂ, ಕೊಲ್ಕತ್ತಾದಲ್ಲಿ 87.69 ರೂ. ಇದೆ.
ಭಾರತದಲ್ಲಿ ಡೀಸೆಲ್ ಬೆಲೆಯಲ್ಲೂ ನಿನ್ನೆಯ ದರವೇ ಮುಂದುವರೆದಿದೆ. ಕೆಲವು ನಗರಗಳಲ್ಲಿ ಮಾತ್ರ ಡೀಸೆಲ್ ಬೆಲೆ ಇಂದು ಕೊಂಚ ಹೆಚ್ಚಾಗಿದೆ. ಜೈಪುರದಲ್ಲಿ 1 ಲೀಟರ್ ಡೀಸೆಲ್ ಬೆಲೆ 84.77ರಿಂದ ಇಂದು 85.39 ರೂ.ಗೆ ಏರಿಕೆಯಾಗಿದೆ. ಚೆನ್ನೈ, ಮುಂಬೈ, ಹೈದರಾಬಾದ್, ಭುವನೇಶ್ವರದಲ್ಲಿ 1 ಲೀಟರ್ ಡೀಸೆಲ್ ಬೆಲೆ 83 ರೂ. ದಾಟಿದೆ. ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ಗೆ 76.48 ರೂ. ಇದೆ. ಚೆನ್ನೈನಲ್ಲಿ 81.71 ರೂ, ಮುಂಬೈನಲ್ಲಿ 83.30 ರೂ, ಬೆಂಗಳೂರಿನಲ್ಲಿ 81.10 ರೂ, ಹೈದರಾಬಾದ್ನಲ್ಲಿ 83.46 ರೂ. ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.
ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿದೆ. ನಿನ್ನೆಗಿಂತ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಕೊಂಚ ಏರಿಕೆ ಕಂಡುಬಂದಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಆಗುತ್ತಿದ್ದರೂ, ಕೊರೊನಾ ಕಾರಣಗಳಿಂದ ಜನಸಾಮಾನ್ಯರು ಕಷ್ಟದಲ್ಲಿದ್ದರೂ, ಸಾರ್ವಜನಿಕರು ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಲೆಕ್ಕಿಸದ ಸರ್ಕಾರಿ ಒಡೆತನದ ತೈಲ ಕಂಪನಿಗಳು ಸತತವಾಗಿ ಬೆಲೆ ಏರಿಕೆಯಲ್ಲಿ ನಿರತವಾಗಿವೆ.