download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

PFI ಗಲಭೆ 3 ದಿನ ನಿಷೇಧಾಜ್ಞೆ

ಮಂಗಳವಾರ ಉಪ್ಪಿನಂಗಡಿ ಪೊಲೀಸರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಿಎಫ್‌ಐ-ಎಸ್‌ಡಿಪಿಐ ಕಾರ್ಯಕರ್ತರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡು ಹೋಗಿದ್ದರು. ಈ ಸುದ್ದಿ ಹರಡುತ್ತಿದ್ದಂತೆ ಪಕ್ಷದ ನೂರಾರು ಕಾರ್ಯಕರ್ತರು ಪೊಲೀಸ್ ಠಾಣೆ ಬಳಿ ಜಮಾಯಿಸಿ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಸ್ವಲ್ಪ ಸಮಯದ ನಂತರ, ಪೊಲೀಸರು ಬಂಧಿತ ಮೂವರಲ್ಲಿ ಒಬ್ಬನನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.

ಉಪ್ಪಿನಂಗಡಿ ಡಿ 16 : ನಗರದಲ್ಲಿ ನಡೆದ PFI ಗಲಭೆ ಹಿನ್ನೆಲೆಯಲ್ಲಿ ನಗರದಾದ್ಯಂತ 3 ದಿನ ನಿಷೇಧಾಜ್ಞೆ ಹೇರಲಾಗಿದೆ ಎಂದು ಮಂಗಳೂರು ಎಸ್ಪಿ ರಿಷಿಕೇಶ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಉಪ್ಪಿನಂಗಡಿಯಲ್ಲಿ ಪಿಎಫ್‌ಐ-ಎಸ್‌ಡಿಪಿಐ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಶುಕ್ರವಾರ ಮಧ್ಯರಾತ್ರಿಯವರೆಗೆ ದಕ್ಷಿಣ ಕನ್ನಡದ ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮೂರು ದಿನಗಳ ಕಾಲ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಂಗಳವಾರ ಉಪ್ಪಿನಂಗಡಿ ಪೊಲೀಸರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಿಎಫ್‌ಐ-ಎಸ್‌ಡಿಪಿಐ ಕಾರ್ಯಕರ್ತರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡು ಹೋಗಿದ್ದರು. ಈ ಸುದ್ದಿ ಹರಡುತ್ತಿದ್ದಂತೆ ಪಕ್ಷದ ನೂರಾರು ಕಾರ್ಯಕರ್ತರು ಪೊಲೀಸ್ ಠಾಣೆ ಬಳಿ ಜಮಾಯಿಸಿ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಸ್ವಲ್ಪ ಸಮಯದ ನಂತರ, ಪೊಲೀಸರು ಬಂಧಿತ ಮೂವರಲ್ಲಿ ಒಬ್ಬನನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.

ವ್ಯಕ್ತಿಯ ಬಿಡುಗಡೆಯ ನಂತರ ಪೊಲೀಸ್ ಠಾಣೆಯಿಂದ ಹೊರಬಂದ ಪ್ರತಿಭಟನಾಕಾರರು ಸ್ವಲ್ಪ ಸಮಯದ ನಂತರ ಮತ್ತೆ ಬಂದು ಇತರೆ ಇಬ್ಬರನ್ನೂ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು ಎಂದು ಎಸ್ಪಿ ರಿಷಿಕೇಶ್ ಸೋನಾವಾನೆ ಹೇಳಿದರು. 

ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಮಾರಕಾಯುಧಗಳೊಂದಿಗೆ ಠಾಣೆಗೆ ನುಗ್ಗಲು ಯತ್ನಿಸಿದಾಗ ಮಹಿಳಾ ಪಿಎಸ್‌ಐ ಓಮನಾ ಹಾಗೂ ಇತರೆ ಸಿಬ್ಬಂದಿ ತಡೆಯಲು ಯತ್ನಿಸಿದರಾದರೂ ಪಿಎಫ್‌ಐ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಪರಿಸ್ಥಿತಿ ಹತೋಟಿ ಮೀರುತ್ತಿರುವುದನ್ನು ಅರಿತ ಪೊಲೀಸರು ಗುಂಪನ್ನು ಚದುರಿಸಲು ಯತ್ನಿಸಿದರು. ಆಗ ಆಂಬ್ಯುಲೆನ್ಸ್‌ನಲ್ಲಿ ಕೊಂಡೊಯ್ದಿದ್ದ ಚೂಪಾದ ಆಯುಧಗಳು ಮತ್ತು ಸೋಡಾ ಬಾಟಲ್‌ಗಳಿಂದ ಪೊಲೀಸರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಈ ವೇಳೆ ಡಿವೈಎಸ್ಪಿ ಶ್ರೇಣಿಯ ಅಧಿಕಾರಿ ಸೇರಿದಂತೆ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ. ಕಲ್ಲು ತೂರಾಟದಲ್ಲಿ ಬಂಟ್ವಾಳ ಪಿಎಸ್‌ಐ ಪ್ರಸನ್ನ ಕುಮಾರ್ ಅವರ ಬಲಗೈಗೆ ಚಾಕುವಿನಿಂದ ಇರಿದಿದ್ದು, ಪುತ್ತೂರು ಡಿವೈಎಸ್ಪಿ ಗಣ ಪಿ ಕುಮಾರ್ ಅವರ ಎಡಗೈಗೆ ಗಾಯವಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. 

ಪೊಲೀಸರು ಲಾಠಿ ಚಾರ್ಜ್‌ಗೆ ಮುಂದಾದಾಗ, ಜನಸಮೂಹವು ಭಯಭೀತರಾಗಿ ಓಡಿ ಹತ್ತಿರದ ಮಸೀದಿಯಲ್ಲಿ ಆಶ್ರಯ ಪಡೆದರು ಅಲ್ಲಿಂದ ಅವರು ಪೊಲೀಸರ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ಎಸೆಯುವುದನ್ನು ಮುಂದುವರೆಸಿದರು. ಘಟನೆಯಲ್ಲಿ ಪೊಲೀಸರಿಗೆ ಸೇರಿದ ಹಲವಾರು ವಾಹನಗಳು ಮತ್ತು ಪೊಲೀಸ್ ಠಾಣೆಯ ಸಾರ್ವಜನಿಕರು ಮತ್ತು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article