Bengaluru : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI Ban Petition Dismissed) ನಿಷೇಧವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್‌ನ(Highcourt) ಏಕಸದಸ್ಯ ಪೀಠ ವಜಾಗೊಳಿಸಿದೆ.

ಕೇಂದ್ರ ಸರ್ಕಾರದ(Central Government) ನಿರ್ಧಾರವನ್ನು ಪ್ರಸ್ನಿಸಿ ರಾಜ್ಯ ಪಿಎಫ್‌ಐ ಅಧ್ಯಕ್ಷ ನಾಸಿರ್ ಅಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಕುರಿತು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಪ್ರಕಟಿಸಿದೆ.
ಇನ್ನು ಯುಎಪಿಎ ಕಾಯ್ದೆಯಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು 5 ವರ್ಷದ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿತ್ತು.
ದೇಶದಲ್ಲಿ ಕೋಮುದಳ್ಳುರಿ ಸೃಷ್ಟಿಸುವುದು, ಉಗ್ರ ಚಟುವಟಿಕೆಗಳನ್ನು ನಡೆಸುವುದು,
ಇದನ್ನೂ ಓದಿ : https://vijayatimes.com/how-to-reduce-fat/
ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸಿನ ನೆರವು ಮತ್ತು ರಾಜಕೀಯ ನಾಯಕರ ಹತ್ಯೆ(Murder) ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಪಿಎಫ್‌ಐ ಕೈವಾಡವಿದ್ದು, ಹೀಗಾಗಿ ನಿಷೇಧ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು.
ಆದರೆ ರಾಜ್ಯ ಪಿಎಫ್‌ಐ ಅಧ್ಯಕ್ಷ ನಾಸಿರ್ ಅಲಿ ಸದ್ಯ ಜೈಲಿನಲ್ಲಿದ್ದು, ಪತ್ನಿ ಮೂಲಕ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.

ಇನ್ನು ಹೈಕೋರ್ಟ್‌ತೀರ್ಪಿನ ನಂತರ ಬಿಜೆಪಿ, ರಾಜ್ಯ ಕಾಂಗ್ರೆಸ್‌ವಿರುದ್ದ ವಾಗ್ದಾಳಿ ನಡೆಸಿದ್ದು, ‘ಉಗ್ರಭಾಗ್ಯ’ ಯೋಜನೆಯಡಿ ಪಿಎಫ್‌ಐ ಮತಾಂಧರ 175 ಕೇಸುಗಳನ್ನು ಸಿದ್ದರಾಮಯ್ಯ ರದ್ದುಗೊಳಿಸಿದ್ದು ಯಾಕೆ? ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರೂ ಅಂದು ಕಾಂಗ್ರೆಸ್ ಪಕ್ಷ ಪಿಎಫ್‌ಐ ಉಗ್ರರ ಮೇಲೆ ಅನುಕಂಪ ತೋರಿದ್ದು ಏಕೆ?
https://fb.watch/h6_9JrDPUG/ PROMO | ಥೂ ಥೂ..ಇದೆಂಥಾ ರಸ್ತೆ ರೀ? ಎಲ್ಲಿದೆ ಚಿನ್ನದ ರಸ್ತೆ?
ಕಾಂಗ್ರೆಸ್ ನಿಮ್ಮ ಬಳಿ ಉತ್ತರವಿದೆಯೇ? ಕಾಂಗ್ರೆಸ್ ಅಧಿಕಾರದಲ್ಲಿರುವಾಗ ಪಿಎಫ್‌ಐ ಕ್ರಿಮಿಗಳ ಮೇಲಿನ 175 ಪ್ರಕರಣಗಳನ್ನು ಸಿದ್ದರಾಮಯ್ಯ ಅವರು ಹಿಂಪಡೆದಿದ್ದರು.
ಅದೇ ಪಿಎಫ್‌ಐ ಉಗ್ರರು ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಮತಾಂಧರ ಮೇಲಿನ ಪ್ರಕರಣ ರದ್ದು ಪಡಿಸುವ ಮೂಲಕ ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ್ದೇ ಕಾಂಗ್ರೆಸ್ ಎಂದು ಟೀಕಿಸಿದೆ.
ಇದನ್ನೂ ಓದಿ : https://vijayatimes.com/new-update-of-ration-card/
ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ನರೇಂದ್ರ ಮೋದಿ ಅವರ ಸರ್ಕಾರದ ದಿಟ್ಟ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಪಿಎಫ್ಐ ಸಂಘಟನೆಯ ನಿಷೇಧವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಆ ಸಂಘಟನೆಯ ಮೇಲಿನ ಕೇಸ್ ವಾಪಾಸ್ ಪಡೆದಿದ್ದ ಸಿದ್ದರಾಮಯ್ಯ ಅವರು ಮುಖ ಮರೆಸಿಕೊಂಡಿದ್ದಾರೆ ಎಂದು ಲೇವಡಿ ಮಾಡಿದೆ.
- ಮಹೇಶ್.ಪಿ.ಎಚ್