ದೈಹಿಕ ಶಿಕ್ಷಕರ ಬೇಡಿಕೆ ಇಡೇರಿಸಲು ಕ್ರಮ – ಬಿ. ಸಿ. ನಾಗೇಶ್

ಬೆಂಗಳೂರು ಸೆ 2 : ರಾಜ್ಯದ ದೈಹಿಕ ಶಿಕ್ಷಕರ ಬೇಡಿಕೆಯನ್ನು ಇಡೇರಿಸಲು ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿ ನೀಡಬೇಕೆಂಬುದು ಕರ್ನಾಟಕ ರಾಜ್ಯ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಬೇಡಿಕೆಯಾಗಿತ್ತು. ಈಗ ಆ ಪ್ರಕ್ರಿಯೆ ಮುಗಿದಿದೆ ಎಂದರು. ಜೊತೆಗೆ 2016ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪದೋನ್ನತಿ ಪ್ರಕ್ರಿಯೆ ನಡೆದಿದ್ದು, 5 ವರ್ಷಗಳ ಕಾಲ ಪ್ರೌಢ ಶಾಲಾ ದೈಹಿಕ ಶಿಕ್ಷಕರಿಗೆ ಯಾವುದೇ ಪದೋನ್ನತಿ ನೀಡಿರಲಿಲ್ಲ. ನೆನೆಗುದಿಗೆ ಬಿದ್ದಿದ್ದ ಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಆಡಳಿತಾತ್ಮಕ ಸಮಸ್ಯೆ ಬಗೆಹರಿಸಲಾಗಿದೆ ಎಂದಿದ್ದಾರೆ. ಮಕ್ಕಳಲ್ಲಿ ಶಿಸ್ತು ಬೆಳೆಯುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ವದ್ದು. ರಾಜ್ಯದ  ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

Exit mobile version