ನವೆಂಬರ್ 8 ರಿಂದ ರಾಜ್ಯದಲ್ಲಿ ಅಂಗನವಾಡಿ ಪ್ರಾರಂಭ

ಬೆಂಗಳೂರು:ಮಹಾಮಾರಿ ಕೊರೊನಾದಿಂದ ಇಡೀ ದೇಶದಾದ್ಯಂತ ಶಾಲಾ ಕಾಲೇಜುಗಳು ಮುಚ್ಚಿದ್ದವು.ಇದೀಗ ಶಾಲಾ ಕಾಲೇಜುಗಳು ಬಹುತೇಕ ಪ್ರಾರಂಭಗೊಂಡಿದೆ ಹಾಗೂ ನವೆಂಬರ್ 8ರಿಂದ ರಾಜ್ಯದಲ್ಲಿ ಅಂಗನವಾಡಿ ಓಪನ್ ಮಾಡಲು ಮಹಿಳಾ&ಮಕ್ಕಳ ಕಲ್ಯಾಣ ಇಲಾಖೆಯಿಂದ ಗೈಡ್‌ಲೈನ್ಸ್ ಹೊರಡಿಸಲಾಗಿದೆ.

ಕೊರೊನಾ ರೋಗದಿಂದಾಗಿ ರಾಜ್ಯಾದಲ್ಲಿ ಒಂದೂವರೆ ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಮುಚ್ಚಲಾಗಿತ್ತು. ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳು ಪೂರ್ಣ ಪ್ರಮಾಣದಲ್ಲಿ ಪುನರಾರಂಭಗೊಳ್ಳಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಮಂಗಳವಾರ ತಿಳಿಸಿದ್ದಾರೆ.

ನವೆಂಬರ್ 8ರಿಂದ ರಾಜ್ಯದಲ್ಲಿ ಅಂಗನವಾಡಿ ಓಪನ್ ಆಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆದಿರಬೇಕು. ಅಂಗನವಾಡಿ ಕೇಂದ್ರವನ್ನು ಸ್ವಚ್ಛಗೊಳಿಸಬೇಕು. ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Exit mobile version