ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಸಬಲೀಕರಣಕ್ಕೆ ಪಿಎಂ ಕೇರ್ಸ್‌ ಫಾರ್‌ ಚಿಲ್ಡ್ರನ್‌ ಆರಂಭ

ಹೊಸದಿಲ್ಲಿ, ಮೇ. 31: ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಸಬಲೀಕರಣ ಮತ್ತು ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಪಿಎಂ ಕೇರ್ಸ್‌ ಫಾರ್‌ ಚಿಲ್ಡ್ರನ್‌ ಆರಂಭ ಮಾಡಿದೆ.

ಈ ಯೋಜನೆ ಅನ್ವಯ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ 18 ವರ್ಷ ತುಂಬಿದ ಬಳಿಕ ಪ್ರತಿ ತಿಂಗಳು ಸ್ಟೈಫಂಡ್ ನೀಡಲಾಗುವುದು. 23 ವರ್ಷ ತುಂಬಿದ ಬಳಿಕ ಪಿಎಂ ಕೇರ್ಸ್ ನಿಂದ 10 ಲಕ್ಷ ರೂ. ನಗದು ಪಡೆಯಲಿದ್ದಾರೆ. ಜೊತೆಗೆ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಒದಗಿಸಲಾಗುವುದು, ಉನ್ನತ ಶಿಕ್ಷಣಕ್ಕಾಗಿ ಪಡೆಯಲಾಗುವ ಸಾಲದ ವ್ಯವಸ್ಥೆಯನ್ನು ಮಾಡಿ, ಬಡ್ಡಿಯನ್ನು ಕೇಂದ್ರ ಸರ್ಕಾರ ಪಾವತಿಸಲಿದೆ.

ಕೋವಿಡ್ ನಿಂದ ಅನಾಥರಾದ ಮಕ್ಕಳು 18 ವರ್ಷದವರಾಗುವವರೆಗೆ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ 5 ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಪಡೆಯಲಿದ್ದಾರೆ. ಇದರ ಪ್ರೀಮಿಯಂ ಮೊತ್ತವನ್ನು ಪಿಎಂ ಕೇರ್ಸ್ ನಿಂದ ಪಾವತಿಸಲಾಗುವುದು.

Exit mobile version