ನವದೆಹಲಿ, ಆ. 09: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು.
ಬಳಿಕ ಹಲವು ರೈತರ ಜತೆ ಸಂವಾದ ನಡೆಸಿದ ಪ್ರಧಾನಿಯವರು, ದೇಶವನ್ನು ಉದ್ದೇಶಿಸಿ ಮಾತನಾಡಿದರು. ಕಿಸಾನ್ ಸಮ್ಮಾನ್ ಯೋಜನೆ 9ನೇ ಕಂತಿನಲ್ಲಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ ಸುಮಾರು ₹19,500 ಕೋಟಿ ವರ್ಗಾವಣೆಯಾಗಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನವಾಗಲಿದೆ ಎಂದು ಮೋದಿ ಹೇಳಿದರು.
₹ 1 ಲಕ್ಷ ಕೋಟಿಯ ಕೃಷಿ ಮೂಲಸೌಕರ್ಯ ನಿಧಿಯಿಂದ ಸಹಸ್ರಾರು ರೈತರಿಗೆ ಪ್ರಯೋಜನವಾಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.