ಕೊರೋನಾ ಲಸಿಕೆ ತಯಾರಕರ ಜೊತೆ ಇಂದು ಸಂಜೆ ಪ್ರಧಾನಿ ಮೋದಿ ಸಭೆ

ನವದೆಹಲಿ, ಏ. 20: ದೇಶದಲ್ಲ್ಲಿ ಹೆಚ್ಚುತ್ತಿರುವ ಕೊರೋನಾ ಒಮದು ಕಡೆಯಾದರೆ, ಕೊರೋನಾ ಲಸಿಕೆಯ ಕೊರತೆ ಉಂಟಾಗಿರವುದು ಮತ್ತೊಂದು ಕಡೆ. ಇದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನಡುವಿನ‌ ಕಾದಾಟಕ್ಕೂ ಕಾರಣವಾಗಿದೆ. ಇದೀಗ ಮೇ 1ರಿಂದ 18 ವರ್ಷ ದಾಟಿದ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ನಿರ್ಧಾರ ಮಾಡಲಾಗಿದೆ. ಈ‌ ಹಿನ್ನಲೆಯಲ್ಲಿ ಇಂದು ಕೊರೊನಾ ಲಸಿಕೆ ಉತ್ಪಾದನಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮಾಲೋಚನೆ ನಡೆಸಿದ್ದಾರೆ.

ಸಂಜೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ಲಸಿಕೆ ಉತ್ಪಾದನಾ ಸಂಸ್ಥೆಗಳ ಮುಖ್ಯಸ್ಥರ ಜೊತೆಗಿನ ಸಭೆ ನಡೆಯಲಿದ್ದು, ದೇಶದಲ್ಲಿ ಕೊರೋನಾ ಲಸಿಕೆ ಉತ್ಪಾದನೆಯ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಾಗುವುದು.‌ ಲಸಿಕೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವ ರೀತಿ ನೆರವು ನೀಡಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಲಾಗುತ್ತಿದೆ.

ಇದಲ್ಲದೆ ರಾಜ್ಯ ಸರ್ಕಾರಗಳು ನೇರವಾಗಿ ಲಸಿಕೆ ಉತ್ಪಾದನಾ ಸಂಸ್ಥೆಗಳಿಂದ ಲಸಿಕೆಗಳನ್ನು ಖರೀದಿ ಮಾಡಬಹುದು ಎಂದು ನಿರ್ಧರಿಸುವುದರಿಂದ ಇಂದಿನ ಸಭೆಯಲ್ಲಿ ಲಸಿಕೆ ಉತ್ಪಾದನಾ ಸಂಸ್ಥೆಗಳು ರಾಜ್ಯ ಸರ್ಕಾರಗಳ ಜೊತೆ ಮಾಡಿಕೊಳ್ಳಬೇಕಾದ ಒಪ್ಪಂದದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Exit mobile version