ಪ್ರಧಾನಿ ಮೋದಿಯ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು, ಜ. 27: ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಸಲುವಾಗಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಅಂತ ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ, ಹೀಗಾಗಿ ರೈತರು ಎಷ್ಟೇ ಪ್ರತಿಭಟನೆ ನಡೆಸಿದರೂ ಅವುಗಳನ್ನು ವಾಪಾಸು ಪಡೆಯುತ್ತಿಲ್ಲ.

ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲವೇ?. ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರೂ ರೈತ ವಿರೋಧಿ‌ ಕಾನೂನುಗಳನ್ನು ವಾಪಸು‌ ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ ಎಂದು ಟೀಕಿಸಿದರು.

ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ‌ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Latest News

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?