ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ; ಹಲವು ಯೋಜನೆಗಳಿಗೆ ಚಾಲನೆ, ವೇಳಾಪಟ್ಟಿ ಹೀಗಿದೆ

Bengaluru :  ಕೆಲವು ಹೊಸ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ(PM To Bengaluru) ಅವರು ಇಂದು ಬೆಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರಧಾನಿಗಳ ಕಾರ್ಯಕ್ರಮಗಳ ಪೂರ್ಣ ವೇಳಾಪಟ್ಟಿ ಹೀಗಿದೆ.

ಹಲವು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ರಾಜಧಾನಿ(PM To Bengaluru) ಬೆಂಗಳೂರಿಗೆ ಆಗಮಿಸಲಿದ್ದಾರೆ.

ಅವರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ(KIA) ಎರಡನೇ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ.

ನಂತರ ಬೆಂಗಳೂರು ನಗರದ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸೇವೆ ಸಲ್ಲಿಸಲು ಸಿದ್ಧವಾಗಿರುವ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್(Vande Bharat Express) ರೈಲಿಗೆ ಸಹ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ : https://vijayatimes.com/health-tips-for-body-temperature/

ಈ ಕುರಿತು ಪ್ರಧಾನಿ ಮೋದಿ ಅವರು ಟ್ವಿಟರ್‌ನಲ್ಲಿ ಸಂದೇಶವನ್ನು ಹಂಚಿಕೊಂಡಿದ್ದು “ನಾಳೆ ನವೆಂಬರ್ 11 ರಂದು ರೋಮಾಂಚಕ ನಗರವಾದ ಬೆಂಗಳೂರಿನಲ್ಲಿ ಇರಲು ನಾನು ಎದುರು ನೋಡುತ್ತಿದ್ದೇನೆ.

ಶ್ರೀ ನಾಡಪ್ರಭು ಕೆಂಪೇಗೌಡರ ಪುತ್ಥಳಿ(Kempegowda Statue) ಅನಾವರಣ ಮಾಡುವ ಅವಕಾಶ ಸಿಕ್ಕಿರುವುದು ನನಗೆ ಗೌರವ ತಂದಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ಅನೇಕರು ಪ್ರಧಾನಿಗೆ ತಮ್ಮ ಆತ್ಮೀಯ ಸ್ವಾಗತವನ್ನು ಕೋರಿದ್ದಾರೆ. “ಬೆಂಗಳೂರಿನ ನಿರ್ಮಾತೃ ನಾಡಪ್ರಭು ಶ್ರೀ ಕೆಂಪೇಗೌಡರ 108 ಅಡಿ ಪ್ರತಿಮೆ ಅನಾವರಣಕ್ಕೆ ಆಗಮಿಸಲಿರುವ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಸ್ವಾಗತ” ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಟ್ವೀಟ್‌ ಮಾಡಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ನಗರಕ್ಕೆ ಭೇಟಿ ನೀಡುತ್ತಿರುವ ಕಾರಣ ನಗರದ ಕೆಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಏಕೆಂದರೆ ಪ್ರಧಾನಿ ಬೆಂಗಾವಲು ಪಡೆಗಾಗಿ ಅನೇಕ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗುತ್ತಿದೆ.

ಇದನ್ನೂ ಓದಿ : https://vijayatimes.com/messi-used-tissue-sold/

ಹೀಗಾಗಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಶುಕ್ರವಾರ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ವಾಹನ ಸಂಚಾರವನ್ನು ನಿಷೇಧಿಸುವ ರಸ್ತೆಗಳನ್ನು ಪಟ್ಟಿ ಮಾಡಿದೆ.

ಈ ನಡುವೆ ಬೆಂಗಳೂರು ಸಂಚಾರ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡ ಅವರು ಸಾರ್ವಜನಿಕ ಸಹಕಾರವನ್ನು ಕೋರಿರುವ ವಿಡಿಯೋವನ್ನು ಬೆಂಗಳೂರು ನಗರ ಪೊಲೀಸರು ಹಂಚಿಕೊಂಡಿದ್ದಾರೆ.

Exit mobile version