• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆ: ಐದು ವರ್ಷಗಳಲ್ಲಿ 15 ಸಾವಿರಕ್ಕೂ ಅಧಿಕ ಕೇಸ್
0
SHARES
38
VIEWS
Share on FacebookShare on Twitter

ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚಿದ ಆತಂಕ: ಕರ್ನಾಟಕದಲ್ಲಿ (POCSO cases increased in karnataka) 15 ಸಾವಿರಕ್ಕೂ ಅಧಿಕ ಪೋಕ್ಸೋ ಕೇಸ್

ಐದು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆ; ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣ ದಾಖಲು

ಪ್ರಕರಣಗಳ ತ್ವರಿತ ತನಿಖೆ ಹಾಗೂ ಫಾಸ್ಟ್‌ಟ್ರ್ಯಾಕ್ ವಿಚಾರಣೆಗೆ ಒತ್ತು; ಸರ್ಕಾರದಿಂದ ಹಲವು ಸುರಕ್ಷತಾ ಕ್ರಮ

Bengaluru : ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ (POCSO cases increased in karnataka) ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ 15 ಸಾವಿರಕ್ಕೂ ಅಧಿಕ ಪೋಕ್ಸೋ (POCSO) ಪ್ರಕರಣಗಳು ದಾಖಲಾಗಿದ್ದು, ಮಕ್ಕಳ ಸುರಕ್ಷತೆ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆ ಆರಂಭವಾಗಿದೆ.

POCSO cases increased in karnataka

2021ರಿಂದ 2026ರ ಜುಲೈ ಅಂತ್ಯದವರೆಗೆ ರಾಜ್ಯದಲ್ಲಿ ಒಟ್ಟು 15,578 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕಳೆದ ಏಳು ತಿಂಗಳಲ್ಲೇ 2,135 ಪ್ರಕರಣಗಳು ದಾಖಲಾಗಿರುವುದು

ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತದೆ. ದಿನವೊಂದಕ್ಕೆ ಸರಾಸರಿ ಏಳುರಿಂದ ಎಂಟು ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದರೆ, ಶಿವಮೊಗ್ಗದಲ್ಲಿ ಕಡಿಮೆ ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಇಲಾಖೆಯ ಅಂಕಿ-ಅಂಶಗಳು ತಿಳಿಸಿವೆ.

ಪೋಕ್ಸೋ ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದರೆ, ಕಳೆದ ಕೆಲವು (POCSO cases increased in karnataka) ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗಿದೆ. 2021ರಲ್ಲಿ 2,083 ಪ್ರಕರಣಗಳು ದಾಖಲಾಗಿದ್ದರೆ, 2022ರಲ್ಲಿ 2,287 ಪ್ರಕರಣಗಳು ದಾಖಲಾಗಿವೆ. 2023ರಲ್ಲಿ ಈ ಸಂಖ್ಯೆ 2,893ಕ್ಕೆ ಏರಿಕೆಯಾಗಿದೆ.

2024ರಲ್ಲಿ 3,081 ಪ್ರಕರಣಗಳು ದಾಖಲಾಗಿದ್ದು, 2025ರಲ್ಲಿ 3,099 ಪ್ರಕರಣಗಳು ವರದಿಯಾಗಿವೆ. 2026ರ ಜುಲೈ ಅಂತ್ಯದವರೆಗೆ ಈಗಾಗಲೇ 2,135 ಪ್ರಕರಣಗಳು ದಾಖಲಾಗಿವೆ. ಈ ಅಂಕಿ-

ಅಂಶಗಳು ಮಕ್ಕಳ ಮೇಲಿನ ಅಪರಾಧಗಳ ಬಗ್ಗೆ ಸಮಾಜ ಇನ್ನಷ್ಟು ಎಚ್ಚರಿಕೆ ವಹಿಸುವ ಅಗತ್ಯವನ್ನು ಸೂಚಿಸುತ್ತವೆ. ಇದೇ ವೇಳೆ, ಪ್ರಕರಣಗಳ ಹೆಚ್ಚಳಕ್ಕೆ ಕೇವಲ ಅಪರಾಧಗಳ

ಪ್ರಮಾಣವೇ ಕಾರಣ ಎನ್ನುವುದಕ್ಕಿಂತ, ಕಾನೂನು ಜಾಗೃತಿ ಹೆಚ್ಚಿರುವುದರಿಂದ ದೂರು ನೀಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ ಎಂಬ ಅಂಶವನ್ನು ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತೊಂದು ಆತಂಕಕಾರಿ ಸಂಗತಿಯೆಂದರೆ, ಆರೋಪಿಗಳು ಬಹುತೇಕ ಸಂತ್ರಸ್ತರಿಗೆ ಪರಿಚಯಸ್ಥರಾಗಿರುವುದು.

ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತರು ಹಾಗೂ ನೆರೆಹೊರೆಯವರಂತಹ ಪರಿಚಿತ ವ್ಯಕ್ತಿಗಳ ವಿರುದ್ಧವೂ ಪ್ರಕರಣಗಳು ದಾಖಲಾಗುತ್ತಿರುವುದು ಮಕ್ಕಳ ಸುರಕ್ಷತೆಯ ವಿಚಾರದಲ್ಲಿ ಕುಟುಂಬಗಳು ಹಾಗೂ ಸಮಾಜ ಇನ್ನಷ್ಟು ಜಾಗರೂಕರಾಗಬೇಕಾದ ಅಗತ್ಯವನ್ನು ತೋರಿಸುತ್ತದೆ.

ಹಿಂದೆ ಇಂತಹ ಘಟನೆಗಳು ನಡೆದಾಗ ಕುಟುಂಬದ ಗೌರವ, ಮಕ್ಕಳ ಭವಿಷ್ಯ ಹಾಗೂ ಸಾಮಾಜಿಕ ಒತ್ತಡದ ಕಾರಣದಿಂದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡುವುದನ್ನು ಹಲವರು ತಪ್ಪಿಸುತ್ತಿದ್ದರು. ಕೆಲ ಪ್ರಕರಣಗಳನ್ನು ರಾಜಿ ಮೂಲಕ ಮುಚ್ಚಿಹಾಕುವ ಪ್ರಯತ್ನವೂ ನಡೆಯುತ್ತಿತ್ತು.

ಆದರೆ ಈಗ ಕಾನೂನು ಅರಿವು ಹೆಚ್ಚಾಗುತ್ತಿರುವುದರಿಂದ ಘಟನೆ ನಡೆದ ತಕ್ಷಣ ದೂರು ನೀಡುವ ಮನೋಭಾವವೂ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ಎರಡನೇ ಮತ್ತು ಮೂರನೇ ಹಂತದ ನಗರಗಳಲ್ಲಿಯೂ ಜನರು ಪ್ರಕರಣ ದಾಖಲಿಸಲು ಹಿಂದೇಟು ಹಾಕುತ್ತಿಲ್ಲ ಎಂಬುದು ಗಮನಾರ್ಹವಾಗಿದೆ.

ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತ್ವರಿತ ತನಿಖೆ ಮತ್ತು ವೇಗದ ನ್ಯಾಯದ ಅಗತ್ಯವೂ ಮತ್ತಷ್ಟು ಮಹತ್ವ ಪಡೆದಿದೆ. ಪ್ರಕರಣ ದಾಖಲಾದ ಬಳಿಕ ಸಾಕ್ಷ್ಯಾಧಾರಗಳನ್ನು ತಡಮಾಡದೆ ಸಂಗ್ರಹಿಸುವುದು ತನಿಖೆಯ ದೃಷ್ಟಿಯಿಂದ ಅತ್ಯಂತ ಮುಖ್ಯವಾಗಿದೆ.

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು 60 ದಿನಗಳೊಳಗೆ ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸುವ ಕ್ರಮ ಜಾರಿಯಲ್ಲಿದೆ. ಸಂತ್ರಸ್ತರಿಗೆ ಶೀಘ್ರ ನ್ಯಾಯ ಒದಗಿಸುವ ಉದ್ದೇಶದಿಂದ ಪೋಕ್ಸೋ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳನ್ನೂ ಸ್ಥಾಪಿಸಲಾಗಿದೆ.

ಪ್ರಕರಣಗಳ ವಿಚಾರಣೆ ವಿಳಂಬವಾದರೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ತ್ವರಿತ ವಿಚಾರಣೆ ಅಗತ್ಯ ಎಂದು ಮಕ್ಕಳ ಹಕ್ಕುಗಳ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣ ದಾಖಲಿಸುವುದರ ಜೊತೆಗೆ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆ ಪರಿಣಾಮಕಾರಿಯಾಗಬೇಕಿದೆ.

ಮಕ್ಕಳ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವೂ ಹಲವು ಕ್ರಮಗಳನ್ನು ಕೈಗೊಂಡಿದೆ. ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ರಚಿಸಲಾಗಿದೆ.

ಬೆಂಗಳೂರಿನ ಸೇಫ್ ಸಿಟಿ ಯೋಜನೆಯಡಿ 7,500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಜನನಿಬಿಡ ಪ್ರದೇಶಗಳಲ್ಲಿ 50 ‘ಸೇಫ್ಟಿ ಐಲ್ಯಾಂಡ್’ಗಳನ್ನು (Safety Island) ಗುರುತಿಸಲಾಗಿದೆ. ಮಹಿಳಾ ಪೊಲೀಸ್ ಠಾಣೆಗಳಲ್ಲಿ 35 ಮಾನವ ಕಳ್ಳಸಾಗಣೆ ನಿಷೇಧ ಘಟಕಗಳನ್ನೂ ಸ್ಥಾಪಿಸಲಾಗಿದೆ.

ಇಂತಹ ಸರ್ಕಾರಿ ಕ್ರಮಗಳ ಜೊತೆಗೆ ಮಕ್ಕಳ ಸುರಕ್ಷತೆಯಲ್ಲಿ ಕುಟುಂಬ, ಶಾಲೆ ಮತ್ತು ಸಮಾಜದ ಪಾತ್ರವೂ ಅತ್ಯಂತ ಮಹತ್ವದ್ದಾಗಿದೆ. ಯಾವುದೇ ಅನುಮಾನಾಸ್ಪದ ಘಟನೆ

ಕಂಡುಬಂದರೆ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವುದು ಅಗತ್ಯ. ಮಕ್ಕಳ ಸಹಾಯವಾಣಿ 1098 ಹಾಗೂ ಪೊಲೀಸ್ ಇಲಾಖೆ ಸಹಾಯವಾಣಿ 22943225

ಮೂಲಕ ನೆರವು ಪಡೆಯಬಹುದು. ಮಕ್ಕಳ ಸುರಕ್ಷತೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.

Tags: casesincreasesKarnatakapocso

Related News

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ
ರಾಜಕೀಯ

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ

October 15, 2026
ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ

October 15, 2026
ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

October 15, 2026
ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ

October 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.