• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಪೋಕ್ಸೊ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂಬ ಕಾರಣಕ್ಕೆ, ಅಪ್ರಾಪ್ತ ಮುಸ್ಲಿಂ ಹುಡುಗಿಯ ವಿವಾಹವನ್ನು ರದ್ದುಗೊಳಿಸಿದ ಹೈಕೋರ್ಟ್!

Mohan Shetty by Mohan Shetty
in ರಾಜ್ಯ
ಪೋಕ್ಸೊ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂಬ ಕಾರಣಕ್ಕೆ, ಅಪ್ರಾಪ್ತ ಮುಸ್ಲಿಂ ಹುಡುಗಿಯ ವಿವಾಹವನ್ನು ರದ್ದುಗೊಳಿಸಿದ ಹೈಕೋರ್ಟ್!
0
SHARES
0
VIEWS
Share on FacebookShare on Twitter

Karnataka : ಮುಸ್ಲಿಂ ಅಪ್ರಾಪ್ತ ಬಾಲಕಿಯ ವಿವಾಹವು (Marriage) ಆ ಧರ್ಮದ ವೈಯಕ್ತಿಕ ಕಾನೂನಿನಡಿಯಲ್ಲಿ ಅನುಮತಿಸಲ್ಪಟ್ಟಿದ್ದರೂ ಸಹ ಅದು ಅಮಾನ್ಯವೇ,

ಏಕೆಂದರೆ ಅದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (Pocso overrides personal law) ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಕರ್ನಾಟಕ ಹೈಕೋರ್ಟ್ (Karnataka Highcourt) ಹೇಳಿದೆ.

Pocso overrides personal law

ಒಂದು ಪ್ರಕರಣದ ಕುರಿತು ತೀರ್ಪು ನೀಡುತ್ತಾ ಹೈಕೋರ್ಟ್ ತನ್ನ ಇತ್ತೀಚಿನ ಆದೇಶದಲ್ಲಿ (Pocso overrides personal law) ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದೆ.
ಇಂತಹ ತೀರ್ಪಿಗೆ ಕಾರಣವಾದ ಪ್ರಕರಣದ ವಿವರ ಹೀಗಿದೆ,

ಅಪ್ರಾಪ್ತ ಮುಸ್ಲಿಂ ಯುವತಿಯನ್ನು ವಿವಾಹವಾದ ವ್ಯಕ್ತಿಯೊಬ್ಬನ ಜಾಮೀನು ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರ ಹೈಕೋರ್ಟ್ ಪೀಠವು,

ಅಪ್ರಾಪ್ತ ಮುಸ್ಲಿಂ ಹುಡುಗಿಯೊಬ್ಬಳ 15 ವರ್ಷ ವಯಸ್ಸಿನ ನಂತರ ನಡೆದ ವಿವಾಹವು ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ ಎಂಬ ವಾದವನ್ನು ತಿರಸ್ಕರಿಸಿತು.

ಮಕ್ಕಳ ರಕ್ಷಣೆಗಾಗಿಯೇ ಇರುವ ವಿಶೇಷ ಕಾಯ್ದೆಯಾಗಿರುವ ಪೋಕ್ಸೊ ಕಾಯ್ದೆಯ ನಿಯಮಗಳನ್ನು ಇದು ಉಲ್ಲಂಘಿಸುತ್ತದೆ ಎಂದು ಪೀಠವು ಗಮನಿಸಿದೆ.

ಇದನ್ನೂ ಓದಿ : https://vijayatimes.com/police-to-conduct-an-investigation/

POCSO ಕಾಯ್ದೆಯ (POCSO Act) ಪ್ರಕಾರ, ಯಾವುದೇ ಮಹಿಳೆ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಕಾನೂನುಬದ್ಧ ವಯಸ್ಸು 18 ವರ್ಷಗಳು ಎಂದು ಕೋರ್ಟ್ ಹೇಳಿದೆ.

ಜೂನ್ 16 ರಂದು ಬೆಂಗಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದಾಗ, ಈ 17 ವರ್ಷದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆಂದು ಪ್ರಕರಣ ದಾಖಲಾಗಿತ್ತು.

ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದರಿಂದ ಆರೋಗ್ಯಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, 2006ರ ಬಾಲ್ಯವಿವಾಹ(Child Marriage) ನಿಷೇಧ ಕಾಯಿದೆ,

2006ರ ಸೆಕ್ಷನ್ 9 (ಪುರುಷ ವಯಸ್ಕರಿಗೆ ಶಿಕ್ಷೆ) ಮತ್ತು 10 (ಬಾಲ್ಯ ವಿವಾಹ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

State

ಹಾಗೇ, ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಮುಸ್ಲಿಂ ಯುವತಿಯನ್ನು ಮದುವೆಯಾಗಿ ಗರ್ಭವತಿಯನ್ನಾಗಿಸಿದ್ದಾನೆ ಎಂದು ಆರೋಪಿಸಿ ಅರ್ಜಿದಾರರ ವಿರುದ್ಧ ಪೋಕ್ಸೋ ಕಾಯ್ದೆ (ಲೈಂಗಿಕ ದೌರ್ಜನ್ಯ) ದಾಖಲಿಸಲಾಗಿದೆ.

ಜಾಮೀನು ಕೋರಿ, ಅರ್ಜಿದಾರರ ವಕೀಲರು ಹೈಕೋರ್ಟ್‌ನಲ್ಲಿ ವಾದಿಸಿದರು.

ಮೊಹಮ್ಮದೀಯ ಕಾನೂನಿನ ಪ್ರಕಾರ, ಪ್ರೌಢಾವಸ್ಥೆಯು ಮದುವೆಗೆ ಪರಿಗಣನೆಯಾಗಿದೆ ಮತ್ತು ಸಾಮಾನ್ಯ ಪ್ರೌಢಾವಸ್ಥೆಯ ವಯಸ್ಸನ್ನು 15 ವರ್ಷಗಳು ಎಂದು ಪರಿಗಣಿಸಲಾಗುತ್ತದೆ,

ಆದ್ದರಿಂದ ಈ ಪ್ರಕರಣದಲ್ಲಿ ಹುಡುಗಿ ಪ್ರೌಢಾವಸ್ಥೆಗೆ ಬಂದಿದ್ದರಿಂದ, ಯಾವುದೇ ಕಾನೂನು ಉಲ್ಲಂಘವಾಗಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

https://youtu.be/w3nJxaDhgtM Ms Vijayalakshmi Shibaruru Live

ಆದರೆ, ಪೋಕ್ಸೊ ಕಾಯ್ದೆಯು ವೈಯಕ್ತಿಕ ಕಾನೂನನ್ನು ಅತಿಕ್ರಮಿಸುತ್ತದೆ ಎಂದು ಒತ್ತಿಹೇಳುವ ಮೂಲಕ ಪೀಠವು ಈ ವಾದವನ್ನು ಸ್ಪಷ್ಟವಾಗಿ ತಿರಸ್ಕರಿಸಿತು. ಜೊತೆಗೆ,

ಯುವತಿ ತನ್ನ ಮದುವೆಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪುರಾವೆಗಳಿಲ್ಲ ಮತ್ತು ಅವಳ ಒಪ್ಪಿಗೆಯ ಮೇರೆಗೆ ವಿವಾಹವಾಗಿದೆ ಎಂದು ನ್ಯಾಯಾಲಯವು ಗಮನಿಸಿತು.

Karnataka

ಹಾಗಾಗಿ, “ಅರ್ಜಿದಾರರು ಸಂತ್ರಸ್ತೆಯ ಪತಿಯಾಗಿದ್ದಾರೆ ಮತ್ತು ಈ ಸಂಗತಿಗಳು ಮತ್ತು ಸಂದರ್ಭಗಳನ್ನು ಗಮನಿಸಿದರೆ,

ಅರ್ಜಿದಾರರು ಸ್ವತಃ ವಿಚಾರಣೆಯ ಮೊದಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಿರುವುದರಿಂದ ಮದುವೆಗೆ ಸಂಬಂಧಿಸಿದಂತೆ ಯಾವುದೇ ಗಂಭೀರ ವಿವಾದವಿಲ್ಲ” ಎಂದು ನ್ಯಾಯಾಲಯ ತಿಳಿಸಿದ್ದು,

1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಜಾರಿಗೊಳಿಸಿ ಆರೋಪಿಗೆ ಜಾಮೀನು(Bail) ಮಂಜೂರು ಮಾಡಿದೆ.


ಇದಕ್ಕೂ ಮೊದಲು, ಸೆಪ್ಟೆಂಬರ್ 30 ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ (Haryana Highcourt) ತನ್ನ ಆದೇಶದಲ್ಲಿ 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮುಸ್ಲಿಂ ಮಹಿಳೆ,

ತನ್ನ ಸ್ವಂತ ಇಚ್ಛೆ ಮತ್ತು ಒಪ್ಪಿಗೆಯ ಮೇಲೆ ತನ್ನ ಇಚ್ಛೆಯ ವ್ಯಕ್ತಿಯನ್ನು ಮದುವೆಯಾಗಬಹುದು ಮತ್ತು ಅಂತಹ ವಿವಾಹವು ಸೆಕ್ಷನ್ 12ರ ಪ್ರಕಾರ ಅನೂರ್ಜಿತವಾಗುವುದಿಲ್ಲ ಎಂದು ಹೇಳಿತ್ತು.

https://youtu.be/6yRaS_bkFKE ದಲಿತರಿಗೆಂದು ಮೀಸಲಿಟ್ಟ ಅಂಗಡಿಗಳು ದುರುಪಯೋಗ!

ಆದರೆ, ಬಾಲ್ಯ ವಿವಾಹ ನಿಷೇಧ ಕಾಯಿದೆ 2006ರ ಪ್ರಕಾರ ಈ ಆದೇಶವನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ಸುಪ್ರೀಂಕೋರ್ಟ್‌ನಲ್ಲಿ (Supremecourt) ಪ್ರಶ್ನಿಸಿದೆ.

Tags: highcourtKarnatakaverdict

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.