ಕನ್ನಡದ ಹಿರಿಯ ಸಾಹಿತಿ ಡಾ. ಚನ್ನವೀರ ಕಣವಿ ನಿಧನ!

poet

ಕನ್ನಡದ ಹಿರಿಯ ಸಾಹಿತಿ ಡಾ. ಚನ್ನವೀರ ಕಣವಿ (93 ) ಅವರು ವಯೋಸಹಜ ಖಾಯಿಲೆಯಿಂದಾಗಿ ನಿಧನ ಹೊಂದಿದ್ದಾರೆ. ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ (ARDS) ಚೆನ್ನವೀರ ಕಣವಿ ಬಳಲುತ್ತಿದ್ದರು. ಕಳೆದ 2 ವಾರದಿಂದ ಎಸ್ಡಿಎಂ ಆಸ್ಪತ್ರೆಯಲ್ಲಿ ಕಣವಿಗೆ ಚಿಕಿತ್ಸೆ ನೀಡಲಾಗಿತ್ತು. ಈ ಮೊದಲು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಕಣವಿಯವರಿಗೆ ಕೊರೊನಾ ಸೋಂಕು ಕೂಡ ದೃಢಪಟ್ಟಿತ್ತು.


ಚನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ಎಂದು ಪ್ರಸಿದ್ಧರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು. ಚನ್ನವೀರ ಕಣವಿಯವರು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928 ರ ಜೂನ್ 28ರಂದು ಜನಿಸಿದರು. ತಂದೆ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ. ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಧಾರವಾಡದಲ್ಲಿಯೆ ಮಾಧ್ಯಮಿಕ ಹಾಗು ಕಾಲೇಜು ಶಿಕ್ಷಣ ಪೂರೈಸಿ ಕಣವಿಯವರು 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದು ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿದ್ದರು.


ಪ್ರಶಸ್ತಿ :
ಕರ್ನಾಟಕ ಕವಿರತ್ನ ಪ್ರಶಸ್ತಿ, ಅನಕ್ಕೆ ನಿರ್ಮಾಣ ಪ್ರಶಸ್ತಿ, 2020ರಲ್ಲಿ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್.


ಕವನ ಸಂಕಲನ:
ಕಾವ್ಯಾಕ್ಸಿ, ಭಾವಜೀವಿ, ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ ದಾರಿ ದೀಪ, ನೆಲ, ಮುಗಿಲು, ಎರಡು ದಡ, ನಗರದಲ್ಲಿ ನರಳು, ಜೀವಧ್ವನಿ, ಕಾರ್ತಿಕದ ಮೋಡ ಜೀನಿಯಾ ಹೊಂಬೆಳಕು, ಶಿಶಿರದಲ್ಲಿ ಬಂದ ಸ್ನೇಹಿತ ಚಿರಂತನ ದಾಹ, ಸೇರಿ 15ಕ್ಕೂ ಹೆಚ್ಚು ಕವನ ಸಂಕಲನಗಳ ರಚನೆ.

ವಿಮರ್ಶಾ ಕೃತಿಗಳು:
ಸಾಹಿತ್ಯ ಚಿಂತನ, ಕಾವ್ಯಾನುಸಂಧಾನ, ಸಮಾಹಿತ ಮಧುರಚೆನ್ನ ಸಮತೋಲನ ವಿಮರ್ಶಾತ್ಮಕ ಕೃತಿಗಳು
ಮಕ್ಕಳ ಕೃತಿ:
ಹಕ್ಕಿ ಪುಕ್ಕ ಮತ್ತು ಚಿಣ್ಮರ ಲೋಕವ ತೆರೆಯೋಣ ಕವನ ಸಂಕಲನ

ಪ್ರಶಸ್ತಿ ಮತ್ತು ಪುರಸ್ಕಾರಗಳು :

• 1981ರಲ್ಲಿ ಜೀವಧ್ವನಿ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ

• 1996ರಲ್ಲಿ ಹಾಸನದಲ್ಲಿ ನಡೆದ 65ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ

• 2008ರ ಆಳ್ವಾಸ್ ನುಡಿಸಿರಿ ಸಮ್ಮೇಳನಾಧ್ಯಕ್ಷತೆ

• ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ,

• ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ, ನಾಡೋಜ

Exit mobile version