• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೆರಗೋಡು ಹನುಮ ಧ್ವಜ ತೆರವು ಪ್ರಕರಣ: ವಿರೋಧಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್​ ನೋಟಿಸ್​

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಕೆರಗೋಡು ಹನುಮ ಧ್ವಜ ತೆರವು ಪ್ರಕರಣ: ವಿರೋಧಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್​ ನೋಟಿಸ್​
0
SHARES
117
VIEWS
Share on FacebookShare on Twitter

Mandya: ರಾಜ್ಯದಲ್ಲಿ ಕೆರಗೋಡು ಹನುಮ ಧ್ವಜ ತೆರವು ಪ್ರಕರಣ (Keragodu Hanuman Flag Removal Case) ಭಾರೀ ಸದ್ದು ಮಾಡಿತ್ತು. ಇಲ್ಲಿಯ ಹನುಮ ಧ್ವಜ ತೆರವುಗೊಳಿಸಿರುವುದನ್ನು ವಿರೋಧಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಕೆರಗೋಡು ಠಾಣೆ ಪೊಲೀಸರು (Keragodu Police Station) ನೋಟಿಸ್ ಜಾರಿ ಮಾಡಿದ್ದಾರೆ.

Keragodu Hanuman Flag Case

ಮಂಡ್ಯ (Mandya) ಜಿಲ್ಲೆಯ ಕೆರಗೋಡಿನಲ್ಲಿ 108 ಅಡಿ ಎತ್ತರದ ಕಂಬದ ಮೇಲೆ ಹನುಮ ಧ್ವಜ ಹಾರಿಸಲಾಗಿತ್ತು. ಈ ಧ್ವಜವನ್ನು ಸರ್ಕಾರ ತೆರವುಗೊಳಿಸಿತ್ತು. ಇದನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದ ಹಿಂದೂ ಕಾರ್ಯಕರ್ತರಿಗೆ ಇದೀಗ ಕೆರಗೋಡು ಠಾಣೆ ಪೊಲೀಸರು ನೋಟಿಸ್​ (Notice)​ ಜರಿ ಮಾಡಿದ್ದು, ರೌಡಿ ಶೀಟ್​​ ತೆರೆಯುವ ಸಂಬಂಧ ಏಳು ದಿನದೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.

ಧ್ವಜ ಸ್ಥಂಭ ವಿಚಾರದಲ್ಲಿ ಅನ್ಯಕೋಮಿನ ಜನರನ್ನು ಹೆದರಿಸುವುದು, ಬೆದರಿಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಚೋದನೆ ನೀಡಿದ್ದೀರಿ. ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ನಿರಂತರವಾಗಿ ಸಕ್ರೀಯವಾಗಿರುವುದರಿಂದ ಏಕೆ ನಿಮ್ಮ ಮೇಲೆ ಕರಗೋಡು ಪೊಲೀಸ್​ ಠಾಣೆಯಲ್ಲಿ ರೌಡಿ ಶೀಟ್​ ತೆರೆಯಬಾರದೆಂದು ನಿಮ್ಮ ಸಮಜಾಯಿಸಿಯನ್ನು ಈ ನೋಟಿಸ್​ ತಲುಪಿದ ಏಳು ದಿನಗಳ ಒಳಗೆ ಠಾಣೆಗೆ ಹಾಜರಾಗಿ ಮಾಹಿತಿ ಸಲ್ಲಿಸಬೇಕು ಎಂದು ಕೆರಗೋಡು ಠಾಣೆ ಪೊಲೀಸರು ವಿಶ್ವ ಹಿಂದೂ ಪರಿಷತ್​​ನ ಮೈಸೂರು ಭಾಗದ ಸಹಕಾರ್ಯದರ್ಶಿ ಚಿಕ್ಕಬಳ್ಳಿ ಬಾಲು, ಕಾರ್ತಿಕ್, ಹರೀಶ್​ (Balu, Karthik, Harish) ಅವರಿಗೆ ನೋಟಿಸ್​ ಜಾರಿ ಮಾಡಲಾಗಿದೆ.

ಈ ಮೂವರ ವಿರುದ್ಧ ಗಲಭೆಗೆ ಪ್ರಚೋದನೆ ಆರೋಪದಡಿ ಕಲಂ 143, 341, 353, 149 ಸೆಕ್ಷನ್ ಅಡಿಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಇನ್ನು ರೌಡಿ ಶೀಟ್ ತೆರೆಯುವ ಬಗ್ಗೆ ಪೊಲೀಸರು ನೋಟಿಸ್ ನೀಡಿರುವುದನ್ನು ಖಂಡಿಸಿ ವಕೀಲರು ಹಾಗೂ ಹಿಂದೂ ಕಾರ್ಯಕರ್ತರು ಇಂದು (ಮೇ 11) ಬೆಳಗ್ಗೆ 11 ಗಂಟೆಗೆ ಕೆರಗೋಡಿನಲ್ಲಿ ಪ್ರತಿಭಟನೆ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ.

ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಹೋರಾಟ ಹತ್ತಿಕ್ಕಲು ಮುಂದಾಗಿದೆ. ಪೊಲೀಸರ ಮೂಲಕ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಪ್ರತಿಭಟನೆ ಮಾಡಲಿದ್ದಾರೆ. ವಿವಾದಿತ ಧ್ವಜಸ್ತಂಭದಿಂದ ಪೊಲೀಸ್​ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.

BJP-JDS

ಏನಿದು ಪ್ರಕರಣ?
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜನವರಿ (January) 22 ರಂದು ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿಸಿತ್ತು. ಇದರ ನೆನಪಿಗಾಗಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಸ್ಥರು 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಿದ್ದರು. ಧ್ವಜ ಹಾರಿಸಿದ್ದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದಾಗಿದೆ. ಅಲ್ಲದೇ ಧ್ವಜ ಹಾರಿಸಿದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿ ತಾಲೂಕು ಪಂಚಾಯಿತಿಗೆ ದೂರು ನೀಡಿದ್ದರು. ದೂರಿನ್ವಯ ತಾಲೂಕು ಪಂಚಾಯಿತಿ ಅಧಿಕಾರಿಗಳು ಧ್ವಜವನ್ನು ತೆರವುಗೊಳಿಸಲು ಬಂದಿದ್ದರು. ಇದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು.

ಬಳಿಕ ಪೊಲೀಸರು ಗ್ರಾಮಕ್ಕೆ ಆಗಮಿಸಿ ಧ್ವಜ ತೆರವುಗೊಳಿಸಲು ಮುಂದಾದರು. ಆಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಪೊಲೀಸರು 144 ಸೆಕ್ಷನ್​ ಜಾರಿ ಮಾಡಿದ್ದರು. 144 ಸೆಕ್ಷನ್​ ಜಾರಿಯಾದ ಬಳಿಕವೂ ಪ್ರತಿಭಟನಾಕಾರರು ಸ್ಥಳದಿಂದ ತೆರಳದ ಹಿನ್ನೆಲೆಯಲ್ಲಿ ಲಾಠಿ ಜಾರ್ಜ್​ ಮಾಡಲಾಗಿತು. ಕೊನೆಗೂ ಪೊಲೀಸರು ಧ್ವಜ ತೆರವುಗೊಳಿಸಿದ್ದರು.

ಇದಾದ ಬಳಿಕ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಜನವರಿ 29 ರಂದು ಹನುಮ ಧ್ವಜ ಇಳಿಸಿದ್ದನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ (BJP-JDS)​ ನಾಯಕರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಕೆರಗೋಡಿನಿಂದ ಮಂಡ್ಯದವರೆಗೂ ಪಾದಯಾತ್ರೆ ನಡೆಸಿದ್ದರು.

Tags: BJP-JDSKeragodu Hanuman Flag Removal CaseMandyaNoticepolice

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.