ಬೆಂಗಳೂರು : ಅಮಾನತುಗೊಂಡಿರುವ ಕೆ.ಆರ್.ಪುರಂ ಇನ್ಸ್‌ಪೆಕ್ಟರ್ ನಂದೀಶ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ (Police to conduct an investigation) ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ(Basavaraj Bommai),
ಹೃದಯಾಘಾತದಿಂದ ಸಾವನ್ನಪ್ಪಿದ ಇನ್ಸ್‌ಪೆಕ್ಟರ್ ನಂದೀಶ್ ಅವರ ಸಾವಿನ ಬಗ್ಗೆ ಎಲ್ಲಾ ಕೋನಗಳಿಂದ(Police to conduct an investigation) ತನಿಖೆ ನಡೆಸುವಂತೆ ಡಿಜಿಪಿಗೆ(DGP) ಈಗಾಗಲೇ ನಿರ್ದೇಶನ ನೀಡಿದ್ದೇನೆ.
ಕೆ.ಆರ್.ಪುರಂನಲ್ಲಿ(KR Puram) ಪೋಸ್ಟಿಂಗ್ ಪಡೆಯಲು ಅಮಾನತುಗೊಂಡ ಇನ್ಸ್‌ಪೆಕ್ಟರ್ 60 ರಿಂದ 80 ಲಕ್ಷ ರೂಪಾಯಿ ಪಾವತಿಸಿರುವ ಆರೋಪ.
ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಇದನ್ನೂ ಓದಿ : https://vijayatimes.com/chethan-ahimsa-over-head-bush/
ಕರ್ನಾಟಕದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ನ ಸಾವಿಗೆ ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ದೂಷಿಸುತ್ತಿದ್ದ ವಿಡಿಯೋ ಎಲ್ಲೆಡೆ ವೈರಲ್(Viral) ಆಗಿತ್ತು.
ಈ ವಿಡಿಯೋ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು.
ಕೆ.ಆರ್.ಪುರಂ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ನಂದೀಶ್ ಅವರು ತಮ್ಮ ವ್ಯಾಪ್ತಿಯಲ್ಲಿರುವ ಪಬ್‌ಗಳಿಗೆ ಗಡುವು ಮೀರಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಮಾನತುಗೊಂಡಿದ್ದರು.
ಸಚಿವ ಎಂಟಿಬಿ ನಾಗರಾಜ್ ಮಾತನಾಡಿರುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,

“ಎಂಟಿಬಿ ನಾಗರಾಜ್(MTB Nagaraj) ಅವರು ಹೇಳಿದ್ದು ನಿಜ ಎನ್ನುವುದಕ್ಕೆ ನಾನು ಟ್ಯಾಗ್ ಮಾಡಿರುವ ವಿಡಿಯೋ ತುಣುಕೇ ಸಾಕ್ಷಿ. ನನ್ನ ಪ್ರಶ್ನೆ ಇಷ್ಟೇ, ಈ ಬಗ್ಗೆ ಸಿಎಂ ಏನು ಹೇಳುತ್ತಾರೆ? ಸಂಘ ಸಂಸ್ಕಾರದ ಗೃಹ ಸಚಿವರು ಉತ್ತರ ನೀಡಲೇಬೇಕು.
ಧಮ್ಮಿದ್ರೆ, ತಾಕತ್ತಿದ್ರೆ ಎನ್ನುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯುವ ತಾಕತ್ತು ತೋರಬೇಕು.
ಸಚಿವರೇ ಹೇಳಿದಂತೆ 70-80 ಲಕ್ಷ ರೂ.ಗಳನ್ನು ನಂದೀಶ್ ಅವರು ಯಾರಿಗೆ ಕೊಟ್ಟರು? ಇದರಲ್ಲಿ ಅವರ ಮೇಲಿನ ಉನ್ನತ ಅಧಿಕಾರಿಗಳು, ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಪರ್ಸಂಟೇಜ್ ಹೋಗಿದೆಯಾ? ಅಥವಾ ಕಾಣದ ರಿಮೋಟ್ ಯವುದಾದರೂ ಇದೆಯಾ?
https://www.facebook.com/Vijayatimeskannada/videos/5734324066588978/?mibextid=wDgIVwZBy2PExSHI
ಸಚಿವರಂತೆ ನೀವೂ ಸತ್ಯ ಹೇಳಿ ಸಿಎಂ ಸಾಹೇಬರೇ.. ಅಲ್ಲಿಗೆ, ರಾಜ್ಯದಲ್ಲಿ ಕಾಸಿಗಾಗಿ ಪೋಸ್ಟಿಂಗ್ ನಡೆಯುತ್ತಿದೆ ಎನುವುದನ್ನು ಸ್ವತಃ ಸರಕಾರವೇ ಒಪ್ಪಿಕೊಂಡಂತೆ ಆಗಿದೆ. ಪೋಸ್ಟಿಂಗ್ ಗೆ 70-80 ಲಕ್ಷ ರೂ.
ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತದೆ ಎಂದು ಹೇಳಿರುವ ಸಚಿವ ಎಂಟಿಬಿ ನಾಗರಾಜ್ ಅವರ ಹೇಳಿಕೆಯು ಈ ಸರಕಾರದ ಕಾಸಿಗಾಗಿ ಪೋಸ್ಟಿಂಗ್ ದಂಧೆಗೆ ಹಿಡಿದ ಕನ್ನಡಿ” ಎಂದು ಟೀಕಿಸಿದ್ದರು.
- ಮಹೇಶ್.ಪಿ.ಎಚ್