ದೆಹಲಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಜೋರಾಗಿದ್ದು ರಾಜಸ್ಥಾನ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಸಚಿನ್ ಪೈಲೆಟ್‌ರನ್ನು ವಜಾಗೊಳಿಸಲಾಗಿದೆ.
ಮಂಗಳವಾರ ನಡೆದ ಶಾಸಕಾಂಗ ಸಭೆಯಲ್ಲಿ ಪೈಲೆಟ್ ಹಾಗು ಬಂಡಾಯ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿರುವ ಕಾಂಗ್ರೆಸ್ ಪಕ್ಷ ಇವರ ಜೊತೆ ಮತ್ತಿಬ್ಬರು ಸಚಿವರನ್ನು ಉಚ್ಚಾಟಿಸಲು ಪಕ್ಷ ನಿರ್ಧರಿಸಿರುವ ಕುರಿತು ವರದಿಯಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಸಚಿನ್ ಪೈಲಟ್, ವಿಶ್ವೇಂದ್ರ ಸಿಂಗ್ ಹಾಗೂ ರಮೇಶ್ ಮೀನಾ ಅವರನ್ನು ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಸಚಿನ್ ಪೈಲಟ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಈಗಾಗಲೇ ಬಂಡಾಯ ನಾಯಕರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕೂಡ ಮಾತನಾಡಿ ಬಂಡಾಯ ಶಮನಗೊಳಿಸುವಂತೆ ಕೇಳಿಕೊಂಡಿದ್ದರು. ಆದರೂ ಇಂದು ಕರೆದ ಸಭೆಗೆ ಪೈಲೆಟ್ ಹಾಜರಾಗಿರಲಿಲ್ಲ. ಇದು ಸಹಜವಾಗಿಯೇ ಉಳಿದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಡಿಎಸಿಂ ಸ್ಥಾನದಿಮದ ಕೆಳಗಿಳಿಸಲಾಗಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.
15ಕ್ಕೂ ಹೆಚ್ಚು ಶಾಸಕರನ್ನು ತಮ್ಮೊಂದಿಗೆ ಕರೆದೊಯ್ದು ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಸಚಿನ್ ಪೈಲಟ್ ಅವರ ನಡೆಗೆ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಇಕ್ಕಟ್ಟಿಗೆ ಸಿಲುಕಿಕೊಂಡಿದೆ.