ಮಧ್ಯ ಕರ್ನಾಟಕದ ಹೆಬ್ಟಾಗಿಲು ಚಿತ್ರದುರ್ಗ ಜಿಲ್ಲೆಯ ಸದ್ಯದ ರಾಜಕೀಯ ಚಿತ್ರಣ!

chitradurga

ಚಿತ್ರದುರ್ಗ: ಸದ್ಯ ಹಾಲಿ ಬಿಜೆಪಿ ಶಾಸಕ(BJP MLA) ಜಿ.ಎಚ್ ತಿಪ್ಪಾರೆಡ್ಡಿ(GH Thippa Reddy) ಕ್ಷೇತ್ರದ ಶಾಸಕರು. ವಯಸ್ಸಿನ ಮಿತಿ ಇಲ್ಲವಾದಲ್ಲಿ ಬಹುತೇಕ ಮತ್ತೆ ಟಿಕೆಟ್ ಅವರಿಗೇ ಸಿಗಬಹುದು.

ಹಾಲಿ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ತಮ್ಮ ಪುತ್ರ ಡಾ| ಸಿದ್ಧಾರ್ಥ್ಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗ್ತಿದೆ. ಇನ್ನು ಡಾ. ಸಿದ್ದಾರ್ಥ ಹೆಸರು ಚಿತ್ರದುರ್ಗ(Chitradurga) ಹಾಗೂ ಹಿರಿಯೂರು(Hiriyur) ಎರಡೂ ಕ್ಷೇತ್ರಗಳಲ್ಲಿ ಚಾಲ್ತಿಯಲ್ಲಿದೆ. ಇನ್ನು ಕಾಂಗ್ರೆಸ್ ಪಕ್ಷದಿಂದ ಕಳೆದ ಬಾರಿ ಪರಾಭವಗೊಂಡಿದ್ದ ಹನುಮಲಿ ಷಣ್ಮುಖಪ್ಪ ಹಾಗೂ ಮಾಜಿ ಎಂಎಲ್ಸಿ ರಘು ಆಚಾರ್ ಟಿಕೆಟ್ ಕೇಳುತ್ತಿದ್ದಾರೆ. ಕಾಂಗ್ರೆಸ್‌ನಿಂದ ರಘು ಆಚಾರ್‌ಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ.

ಹೊಸದುರ್ಗ : ಹೊಸದುರ್ಗ ಕ್ಷೇತ್ರದಲ್ಲಿ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್ ಹಾಗೂ ಬಿಜೆಪಿ ಮುಖಂಡ ಎಸ್. ಲಿಂಗಮೂರ್ತಿ ಇಬ್ಬರೂ ಬಿಜೆಪಿ ಟಿಕೆಟ್‌ಗೆ ಭಾರೀ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ಸದ್ಯ ಹೊಸದುರ್ಗದಲ್ಲಿ ಬಿಜೆಪಿ ಪಕ್ಷದೊಳಗೆ ಎರಡು ಬಣಗಳಾಗಿದ್ದು, ಕಾರ್ಯಕರ್ತರು ಗೊಂದಲದಲ್ಲಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಅವರೇ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ.

ಇದೆಲ್ಲದರ ನಡುವೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಇದೇ ಕ್ಷೇತ್ರದಿಂದ ಸ್ಪರ್ಧಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಇಬ್ಬರ ನಡುವೆ ನೇರ ಹಣಾಹಣಿ ಇದೆ. ಹಿರಿಯೂರು ವಿಧಾನಸಭಾ ಕ್ಷೇತ್ರವನ್ನು ಮರಳಿ ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ. ಹೀಗಾಗಿಯೇ ಕ್ಷೇತ್ರದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಹಿರಿಯೂರು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಇಲ್ಲಿ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪ್ರಬಲ ಹಿಡಿತ ಹೊಂದಿದ್ದಾರೆ. ಇನ್ನೊಂದೆಡೆ ಮಾಜಿ ಸಚಿವ ಡಿ.ಸುಧಾಕರ್ ಕೂಡ ಪಟ್ಟು ಸಡಿಲಿಸುತ್ತಿಲ್ಲ. ಹೀಗಾಗಿ ಕ್ಷೇತ್ರದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ.

ಹೊಳಲ್ಕೆರೆ: ಇಲ್ಲಿ ಹಾಲಿ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಮತ್ತೆ ಅಖಾಡಕ್ಕಿಳಿಯುವುದು ಬಹುತೇಕ ಖಚಿತ. ಇನ್ನು ಕಾಂಗ್ರೆಸ್‌ನಿಂದ ಮಾಜಿ ಸಚಿವ ಎಚ್.ಆಂಜನೇಯ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಅನೇಕ ಹೊಸ ಮುಖಗಳು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿವೆ.

Exit mobile version