ಮುಸಲ್ಮಾನರ ಏರಿಯಾದಲ್ಲಿ ಹಿಂದೂಗಳು ಬ್ಯಾನರ್ ಹಾಕಿದ್ದೇಕೆ ಎಂದು ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ. ಅವರದೇ ಮಾತನ್ನು ಅನುಸರಿಸಿದ ಕೊಡಗಿನ ಜನತೆ “ಹಿಂದೂಗಳ ಏರಿಯಾಕ್ಕೆ ಸಿದ್ದರಾಮಯ್ಯ ಬಂದಿದ್ದೇಕೆ” ಎಂದು ಪ್ರತಿಭಟಿಸಿದ್ದಾರೆ, ಪ್ರಶ್ನಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ(State BJP) ಹೇಳಿದೆ.

ಕೊಡಗಿನಲ್ಲಿ(Kodagu) ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆ ನಡೆಸಿ, ಮೊಟ್ಟೆ ಎಸೆದ ಘಟನೆಯೂ ಬಿಜೆಪಿಯ ಪಿತೂರಿ, ಭದ್ರತಾ ವೈಫಲ್ಯ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಸಿದ್ದರಾಮಯ್ಯ ಅವರೇ, ಈ ಪ್ರಶ್ನೆಗೆ ನಿಮ್ಮಲ್ಲಿ ಉತ್ತರವಿದೆಯೇ? ಸಿದ್ದರಾಮಯ್ಯ ಅವರೇ ಕೊಡಗಿನಲ್ಲಿ ನೀವು ಎದುರಿಸಿದ್ದು ಜನರ ಆಕ್ರೋಶ.
ಬಹುಸಂಖ್ಯಾತ ಹಿಂದೂ ಸಮಾಜದ ವಿರುದ್ಧ ನೀವು ನೀಡಿದ ಹೇಳಿಕೆಗಳಿಗೆ ಪ್ರತಿರೋಧವಾಗಿ ಸಂವಿಧಾನದ ಆಶಯದಂತೆ ಜನರು ಪ್ರತಿಭಟಿಸಿದ್ದಾರೆ. ಆದರೆ ಇಲ್ಲಿ ನೀವು ಬೆದರಿಕೆ ಹಾಕುತ್ತಿರುವುದು ಪ್ರಜಾಪ್ರಭುತ್ವದ ಲಕ್ಷಣವೇ? ಎಂದು ಪ್ರಶ್ನಿಸಿದೆ. ಇದಕ್ಕೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರು ಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು.
ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡ ಕಷ್ಟವಾಗಬಹುದು. ಯು.ಪಿ ಮಾದರಿ ಎಂದರೆ ಇದೆನಾ? ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.