Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಕೊರೊನಾದಿಂದ ಮೃತಪಟ್ಟವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಿ: ಎಚ್.ಡಿ.ರೇವಣ್ಣ

ಕರ್ನಾಟಕ ರಾಜ್ಯ ಸರ್ಕಾರ ಬಡವರಿಗೆ ಹಾಗೂ ಶ್ರಮಿಕವರ್ಗದವರಿಗೆ ಘೋಷಣೆ ಮಾಡಿರುವ ಪ್ಯಾಕೇಜ್'ನಲ್ಲಿ ನೀಡಲಾಗಿರುವ ಎರಡು ಸಾವಿರ ರೂಪಾಯಿ ಹಣದಲ್ಲಿ ಬಡವರ ಜೀವನ ನಿರ್ವಹಣೆ ಮಾಡಲು ಸಾಧ್ಯವಿಲ್ಲ. ತಿಂಗಳ ಮನೆ ಬಾಡಿಗೆಯ ಮೊತ್ತವೇ ಕನಿಷ್ಠ ಐದು ಸಾವಿರ ಇರುವಾಗ ಸರ್ಕಾರ ನೀಡುವ ಎರಡು ಸಾವಿರದಲ್ಲಿ ಬಡವರು ಹೇಗೆ ಜೀವನ ನಿರ್ವಹಣೆ ಮಾಡುತ್ತಾರೆ..??
Share on facebook
Share on google
Share on twitter
Share on linkedin
Share on print
Loading...

ಬೆಂಗಳೂರು, ಜೂ. 09: ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆಗ್ರಹಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕರೋನಾ ಸೊಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ವಿಪತ್ತು ನಿಧಿಯಿಂದ ಐದು ಲಕ್ಷ ರೂಪಾಯಿಗಳವರೆಗೆ ಪರಿಹಾರ ನೀಡಲು ಕಾನೂನಿನಲ್ಲಿ ಅವಕಾಶವಿದೆ. ಕೇಂದ್ರ ಸರ್ಕಾರ ಈ ವಿಷಯದಲ್ಲಿ ಜನರಿಗೆ ಅನುಕೂಲವಾಗುವಂತಹ ನಿರ್ಧಾರ ತೆಗೆದುಕೊಳ್ಳಬೇಕು. ಹಾಗೆಯೇ ಕರ್ನಾಟಕ ರಾಜ್ಯ ಸರ್ಕಾರ ಕೂಡ ಕನಿಷ್ಠ ಎರಡು ಲಕ್ಷ ರೂಪಾಯಿಗಳನ್ನು ಕರೋನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Loading...

ಕರ್ನಾಟಕ ರಾಜ್ಯ ಸರ್ಕಾರ ಬಡವರಿಗೆ ಹಾಗೂ ಶ್ರಮಿಕವರ್ಗದವರಿಗೆ ಘೋಷಣೆ ಮಾಡಿರುವ ಪ್ಯಾಕೇಜ್’ನಲ್ಲಿ ನೀಡಲಾಗಿರುವ ಎರಡು ಸಾವಿರ ರೂಪಾಯಿ ಹಣದಲ್ಲಿ ಬಡವರ ಜೀವನ ನಿರ್ವಹಣೆ ಮಾಡಲು ಸಾಧ್ಯವಿಲ್ಲ. ತಿಂಗಳ ಮನೆ ಬಾಡಿಗೆಯ ಮೊತ್ತವೇ ಕನಿಷ್ಠ ಐದು ಸಾವಿರ ಇರುವಾಗ ಸರ್ಕಾರ ನೀಡುವ ಎರಡು ಸಾವಿರದಲ್ಲಿ ಬಡವರು ಹೇಗೆ ಜೀವನ ನಿರ್ವಹಣೆ ಮಾಡುತ್ತಾರೆ..??

ಸರ್ಕಾರ ಈ ಕೂಡಲೇ ಈ ಪ್ಯಾಕೇಜ್’ನ್ನು ಪರಿಷ್ಕರಣೆ ಮಾಡಿ ಕನಿಷ್ಠ ಹತ್ತು ಸಾವಿರ ರೂಪಾಯಿಗಳನ್ನಾದರೂ ಶ್ರಮಿಕ ವರ್ಗದವರಿಗೆ ನೀಡಬೇಕು. ಸರ್ಕಾರ ನೀಡುವುದು ಜನರ ದುಡ್ಡು ಜನರ ತೆರಿಗೆ ಹಣ, ಜನರು ಸಂಕಷ್ಟದಲ್ಲಿರುವ ಈ ಸಮಯದಲ್ಲಿ ಜನರನ್ನು ನಿರ್ಲಕ್ಷ್ಯದಿಂದ ಕಾಣುವುದನ್ನು ಬಿಟ್ಟು ಶ್ರಮಿಕರಿಗೆ ಗೌರವಪೂರ್ವಕವಾಗಿ ಪರಿಹಾರದ ಮೊತ್ತವನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Loading...

Submit Your Article