ಸೆಪ್ಟೆಂಬರ್ ನಲ್ಲಿ ಬಡವ ರಾಸ್ಕಲ್

ಡಾಲಿ ಧನಂಜಯ ನಟನೆ ಹಾಗೂ ನಿರ್ಮಾಣವಿರುವ ‘ ಬಡವ ರಾಸ್ಕಲ್ ‘ ಚಿತ್ರವು ಸೆಪ್ಟೆಂಬರ್ 24 ರಂದು ಬಿಡುಗಡೆಯಾಗಲಿರುವುದಾಗಿ ಚಿತ್ರತಂಡ ಘೋಷಿಸಿದೆ.

ಧನಂಜಯ್ ಹಾಗೂ ಅಮೃತ ಅಯ್ಯಂಗಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಡವ ರಾಸ್ಕಲ್ ಚಿತ್ರಕ್ಕೆ ವಾಸುಕಿ ವೈಭವ್ ಅವರ ಸಂಗೀತ ನಿರ್ದೇಶನವಿದೆ. ಚಿತ್ರವನ್ನು ಶಂಕರ್ ಅವರು ನಿರ್ದೇಶಿಸಿದ್ದು ಪ್ರೀತಾ ಜಯರಾಮನ್ ಅವರು ಛಾಯಾಗ್ರಹಣ ನಿರ್ವಹಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಮುಹೂರ್ತವಾಗಿದ್ದ ಚಿತ್ರವು ಕೋವಿಡ್ ಕಾರಣದಿಂದ ತಡವಾಗಿ ತೆರೆ ಕಾಣುತ್ತಿದೆ. ನಿರ್ದೇಶಕ ಸೂರಿ ಅವರ ‘ ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದಲ್ಲಿ ಜೋಡಿಗಳಾಗಿದ್ದ ಧನಂಜಯ್ ಮತ್ತು ಅಮೃತ ಅಯ್ಯಂಗಾರ್ ಈ ಚಿತ್ರದ ಮೂಲಕ ಮತ್ತೊಮ್ಮೆ ಒಂದಾಗಿದ್ದಾರೆ. ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ. ಚಿತ್ರದಲ್ಲಿ ರಂಗಾಯಣ ರಘು, ತಾರಾ, ನಾಗಭೂಷಣ್ ಮೊದಲಾದವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಡವ ರಾಸ್ಕಲ್ ಚಿತ್ರದ ಸಂಪೂರ್ಣ ಪ್ರಚಾರ ಹಾಗೂ ಡಿಜಿಟಲ್ ಪ್ರಮೋಷನ್ ಕೆ.ಆರ್.ಜಿ.ಸ್ಟುಡಿಯೋಸ್ ಅಂಗಸಂಸ್ಥೆಯಾದ ಕೆ.ಆರ್.ಜಿ. ಕನೆಕ್ಟ್ಸ್ ವಹಿಸಿಕೊಂಡಿರುವುದಾಗಿ ಮಾಧ್ಯಮ ಪ್ರಕಟಣೆಯ ಮೂಲಕ ತಿಳಿಸಲಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ ಬಡವ ರಾಸ್ಕಲ್ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.

Exit mobile version