ಉದ್ಘಾಟನೆಯಾದ ಒಂದೇ ತಿಂಗಳಲ್ಲಿ ಕುಸಿದು ಬಿದ್ದ ಸೇತುವೆ


ಬಿಹಾರ್: ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆಯೊಂದು ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಕುಸಿದು ಬಿದ್ದಿರುವ ಘಟನೆ ಬಿಹಾರದ ಗೋಪಾಲಂಜ್ನಲ್ಲಿ ನಡೆದಿದೆ.


ಬಿಹಾರದ ಗೋಪಾಲಂಜ್ ಎಂಬಲ್ಲಿ ಗಂಡಕ್ ನದಿಗೆ ಅಡ್ಡಲಾಗಿ ಸತ್ತಾರ್ಘಾಟ್ ಬ್ರಿಡ್ಜ್ ನಿರ್ಮಿಸಲಾಗಿತ್ತು. ಈ ಸೇತುವೆಯನ್ನು ಬರೋಬ್ಬರಿ 263.47 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು, ಇದಕ್ಕಾಗಿ ಎಂಟು ವರ್ಷಗಳ ಸಮಯ ಹಿಡಿದಿತ್ತು. ಈ ಸೇತುವೆಯನ್ನು ಕಳೆದ ಜೂ.16ರಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಲೋಕಾರ್ಪಣೆಗೊಳಿಸಿದ್ದರು.


ಆದರೆ ಉದ್ಘಾಟನೆಗೊಂಡ 29 ದಿನಗಳಲ್ಲೇ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ಬಿಹಾರದಲ್ಲಿ ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಗಂಡಕ್ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬಂದ ಹಿನ್ನೆಲೆಯಲ್ಲಿ ಉಂಟಾದ ನೀರಿನ ರಭಸಕ್ಕೆ ಸೇತುವೆಯ ಒಂದು ಭಾಗ ಕುಸಿದಿದೆ.

ಕೋಟ್ಯಾಂತರ ರೂ.ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಕೆಲವೇ ದಿನಗಳಲ್ಲಿ ಕುಸಿದು ಬಿದ್ದಿದ್ದು ಸ್ಥಳೀಯರು ಹಾಗೂ ವಿರೋಧ ಪಕ್ಷಗಳು ಆಕ್ರೋಶಕ್ಕೆ ಕಾರಣವಾಗಿದೆ. ಪ್ರಮುಖವಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಕಾಂಗ್ರೆಸ್ ಮುಖಂಡ ಮದನ್ ಮೋಹನ್, ಸೇತುವೆ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

Exit mobile version