ಮುಂಬೈ, ಏ. 21: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ವಿಪರೀತವಾಗಿ ಹಬ್ಬುತ್ತಿದ್ದು, ವೈದ್ಯಕೀಯ ಸಿಬ್ಬಂದಿ ಅಕ್ಷರಶಃ ಅಪಾಯಕ್ಕೆ ಸಿಲುಕಿದ್ದಾರೆ. ಅಲ್ಲಿನ ಹಿರಿಯ ವೈದ್ಯೆಯೊಬ್ಬರು ಸೋಮವಾರ ಕೋವಿಡ್ಗೆ ಬಲಿಯಾಗಿದ್ಧಾರೆ. ಆದರೆ, ಇವರು ಸಾವಿಗೆ ಮುನ್ನ ಫೇಸ್ಬುಕ್ನಲ್ಲಿ ಹಾಕಿದ ಪೋಸ್ಟ್ ಈಗ ವೈರಲ್ ಆಗಿದೆ.
51 ವರ್ಷದ ಮನಿಶಾ ಜಾಧವ್ ಎಂಬ ವೈದ್ಯೆ ಶನಿವಾರ ತನ್ನ ಫೇಸ್ಬುಕ್ನಲ್ಲಿ ಸಾವಿನ ಸಾಧ್ಯತೆಯನ್ನು ಸ್ಪಷ್ಟವಾಗಿ ತಿಳಿಸಿ ಪೋಸ್ಟ್ ಹಾಕಿದ್ದರು. ಇದು ನನ್ನ ಕೊನೆಯ ಗುಡ್ ಮಾರ್ನಿಂಗ್ ಆಗಿರಬಹುದು. ಈ ವೇದಿಕೆಯಲ್ಲಿ ಮತ್ತೆ ನಾನು ನಿಮಗೆ ಸಿಗದೇ ಹೋಗಬಹುದು.
ದೇಹ ಸಾಯುತ್ತದೆ, ಆದರೆ ಆತ್ಮ ಸಾಯುವುದಿಲ್ಲ ಎಂದು ಮುಂಬೈನ ಸೇವ್ರಿ ಟಿಬಿ ಆಸ್ಪತ್ರೆಯಲ್ಲಿ ಹಿರಿಯ ವೈದ್ಯಾಧಿಕಾರಿ ಆಗಿದ್ದ ಡಾ. ಮನೀಶಾ ಜಾಧವ್ ಪೋಸ್ಟ್ ಮಾಡಿದ್ದರು. ಆದರೆ, ಎರಡು ದಿನಗಳ ಬಳಿಕ ಅವರು ಕೋವಿಡ್ ಸೋಂಕಿನಿಂದ ಚೇತರಿಕೆ ಕಾಣದೇ ಮೃತಪಟ್ಟಿದ್ದಾರೆ. ಅವರ ಸಾವಿನ ಬಳಿಕ ಅನೇಕ ಜನರು ಅವರ ಫೇಸ್ಬುಕ್ ಪೋಸ್ಟ್ಗೆ ಪ್ರತಿಕ್ರಿಯಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.