Visit Channel

86ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾತ್ಕಾಲಿಕ ಮುಂದೂಡಿಕೆ

WhatsApp Image 2021-02-05 at 6.14.22 PM

ಬೆಂಗಳೂರು, ಫೆ. 05: ಫೆಬ್ರವರಿ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಇಂದು ಈ  ಕುರಿತು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯ ನಂತರ  ಸಚಿವ ಅರವಿಂದ ಲಿಂಬಾವಳಿ ಈ ವಿಚಾರ ಪ್ರಕಟಿಸಿದ್ದಾರೆ. ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ನಡೆದ ಸಿದ್ಧತೆಗಳು ಇನ್ನು ಅಪೂರ್ಣವಾಗಿದೆ. ಜೊತೆಗೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರುವುದರಿಂದ  ಕೋವಿಡ್ ನಿಯಮಗಳ ಪಾಲನೆಯು ಕಷ್ಟಕರವಾಗುತ್ತದೆ. ಫೆಬ್ರವರಿ ಅಂತ್ಯಕ್ಕೆ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆ ಇರುವುದರಿಂದ ಅನಂತರ ಮಾರ್ಚ್ 9ಕ್ಕೆ ಮತ್ತೊಂದು ಸಭೆ ನಡೆಸಿ ಸಮ್ಮೇಳನ ನಡೆಸುವ ದಿನಾಂಕ ನಿರ್ಧರಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಗೃಹ ಹಾಗೂ ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ತೋಟಗಾರಿಕಾ ಸಚಿವ  ಆರ್. ಶಂಕರ್, ಶಾಸಕ ನೆಹರು ಓಲೇಕಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮನು ಬಳಿಗಾರ್ ಹಾಗೂ ಹಾವೇರಿ ಜಿಲ್ಲಾಡಳಿತದ ಅಧಿಕಾರಿಗಳು ಭಾಗವಹಿಸಿದ್ದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.