ಗ್ರಾಮೀಣ ಭಾಗದಲ್ಲಿ ಅಸ್ಪೃಶ್ಯತೆ ಆಚರಣೆ: ಈ ಕುರಿತು ಹೈಕೋರ್ಟ್‌ ಆಘಾತ

Bangalore: ಇವತ್ತಿನ ಆಧುನಿಕ ಯುಗದಲ್ಲಿ ಗ್ರಾಮೀಣ ಭಾಗದಲ್ಲಿ ಅಸ್ಪೃಶ್ಯತೆ ಆಚರಣೆ (Practice of untouchability) ಮಾಡುತ್ತಿರುವ ಕುರಿತು ಹೈಕೋರ್ಟ್‌ (High Court) ಬೇಸರ ವ್ಯಕ್ತಪಡಿಸಿದ್ದು,

ಸಾರ್ವಜನಿಕ ಸ್ಥಳದಲ್ಲಿರುವ ದೇವಾಲಯಕ್ಕೆ ದಲಿತ ಕುಟುಂಬ ಪ್ರವೇಶಕ್ಕೆ ಅಡ್ಡಿಪಡಿಸಿ, ಜಾತಿ ಹೆಸರಿನಲ್ಲಿ ನಿಂದಿಸಿ ಹಲ್ಲೆ ನಡೆಸಿದ ಆರೋಪದ ಮೇರೆಗೆ ಎಂಟು ಮಂದಿ ವಿರುದ್ಧದ ಪ್ರಕರಣ ರದ್ದುಗೊಳಿಸಲು

ನಿರಾಕರಿಸಿದೆ.ದಾವಣಗೆರೆಯ ಪಾಂಡುರಂಗ ಭಟ್‌ (Pandurana Bhat) ಸೇರಿ ಇತರ ಏಳು ಮಂದಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ (M. Nagaprasanna)

ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಪ್ರಕರಣ ನಡೆದು ಸುಮಾರು 8 ವರ್ಷಗಳೇ (Practice of untouchability) ಕಳೆದಿರುವುದರಿಂದ ಮುಂದಿನ ಆರು ತಿಂಗಳಲ್ಲಿ ವಿಚಾರಣೆ

ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದೆ.”ದೇವಾಲಯವೆಂದರೆ ಏಕತೆ ಮತ್ತು ಎಲ್ಲರೂ ಒಳ್ಳಗೊಳ್ಳುವಿಕೆಯ ಸಂಕೇತ. ಜತೆಗೆ, ಅಸ್ಪೃಶ್ಯತೆ ಆಚರಣೆ ಸಾಂವಿಧಾನ ಬಾಹಿರವೆಂದು ತಿಳಿದಿದ್ದೂ,

ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ದೇವಾಲಯ ಪ್ರವೇಶ ಮತ್ತು ಪೂಜೆಗೆ ನಿರಾಕರಿಸಿ ಅಡ್ಡಿಪಡಿಸುವ ಪ್ರಕ್ರಿಯೆ ಮುಂದುವರೆದಿರುವುದು ದುರದೃಷ್ಟಕರ,” ಎಂದು ನ್ಯಾಯಾಲಯ

ವಿಷಾದ ವ್ಯಕ್ತಪಡಿಸಿತು.ಅರ್ಜಿದಾರರು ಈ ಪ್ರಕರಣದಲ್ಲಿ ದೂರುದಾರರು ದಲಿತ ಸಮುದಾಯಕ್ಕೆ ಸೇರಿದವರೆಂಬ ಕಾರಣದಿಂದ ದೇವಾಲಯಕ್ಕೆ ಪ್ರವೇಶಕ್ಕೆ ನಿರಾಕರಿಸಿರುವ ವರ್ತನೆ ಖಂಡನೀಯವಾಗಿದ್ದು,

ಈ ರೀತಿಯ ಬೆಳವಣಿಗೆಗಳು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿ ಬೀಳಿಸುತ್ತವೆ. ಮನುಷ್ಯರು ಮನುಷ್ಯರಂತೆ ನಡೆದುಕೊಳ್ಳಬೇಕು. ಈ ರೀತಿಯ ತಾರತಮ್ಯ ತಕ್ಷಣ ನಿಲ್ಲುವಂತಾಗಬೇಕು,”

ಎಂದು ನ್ಯಾಯಪೀಠ ಆದೇಶಿಸಿದೆ.

ಸಂಪೂರ್ಣವಾಗಿ ಅರ್ಜಿದಾರರ ವಾದವನ್ನು ತಳ್ಳಿ ಹಾಕಿರುವ ನ್ಯಾಯಪೀಠವು ”ದೇವಾಲಯದ ಹೊರಭಾಗವೂ ಸಾರ್ವಜನಿಕ ಸ್ಥಳವಾಗಿದೆ. ದೂರುದಾರರು ಮತ್ತವರ ಕಟುಂಬಸ್ಥರು ಪರಿಶಿಷ್ಟ ಜಾತಿಗೆ

ಸೇರಿದವರು ಎಂದು ಗೊತ್ತಾಗಿರುವುದರಿಂದಲೇ ಅವರನ್ನು ಅವಮಾನಿಸುವುದಕ್ಕಾಗಿ ದೇವಾಲಯ ಪ್ರವೇಶಕ್ಕೆ ತಡೆಹಿಡಿದಿದ್ದಾರೆ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿದೆ.

ಪ್ರಕರಣ:
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ವಿನಾಯಕ ನಗರ ಕ್ಯಾಂಪ್‌ನ ಸಾವಿತ್ರಮ್ಮ ಅವರ ಕುಟುಂಬ 2016ರ ಸೆ. 12ರಂದು ಗಡಿಚೌಡೇಶ್ವರಿ ದೇವಸ್ಥಾನಕ್ಕೆ (Gadichowdeswari Temple) ತೆರಳಿತ್ತು.

ಅರ್ಜಿದಾರರು ಜಾತಿ ಹೆಸರು ಉಲ್ಲೇಖಿಸಿ ದೂರುದಾರರ ದೇವಾಲಯ ಪ್ರವೇಶಕ್ಕೆ ಅಡ್ಡಿಪಡಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಹಲ್ಲೆ ನಡೆಸಿದ್ದರು.ಈ ಕುರಿತಂತೆ ಮಲೆಬೆನ್ನೂರು (Malebennur)

ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆ (Indian Penal Code) ಅಡಿ ಕೆಲವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.

ಇದನ್ನು ಓದಿ: ಭಾರತೀಯ ನೌಕಾಪಡೆ ಅಧಿಕಾರಿಗಳ ಮರಣದಂಡನೆಗೆ ವಿರೋಧ: ಭಾರತದ ಮನವಿ ಸ್ವೀಕರಿಸಿದ ಕತಾರ್‌

Exit mobile version