Visit Channel

ಪ್ರಧಾನಿ ಕಚೇರಿ ಒಎಲ್ಎಕ್ಸ್‌ನಲ್ಲಿ; ನಾಲ್ವರ ಬಂಧನ

modi-1608291477

ವಾರಾಣಸಿ, ಡಿ. 18:  ವಾರಾಣಸಿಯ ನಾಲ್ವರು ಯುವಕರು ಪ್ರಧಾನಿ ನರೇಂದ್ರ ಮೋದಿಯವರ ಕಚೇರಿಯನ್ನೇ ಒಎಲ್‌ಎಕ್ಸ್‌ನಲ್ಲಿ ಮಾರಾಟಕ್ಕಿಟ್ಟಿದ್ದಾರೆ. ಈ ವಿಷಯ ಗೊತ್ತಾದ ಕೂಡಲೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಶುಕ್ರವಾರ ನಾಲ್ವರನ್ನು ಬಂಧಿಸಿದ್ದಾರೆ.

‘ಜವಾಹರ್‌ ನಗರದಲ್ಲಿರುವ ಪ್ರಧಾನಿಯವರ ಜನಸಂಪರ್ಕ ಕಾರ್ಯಾಲಯದ ಫೋಟೊ ಕ್ಲಿಕ್ಕಿಸಿಕೊಂಡಿದ್ದ ಆರೋಪಿಯೊಬ್ಬ ಅದನ್ನು ಒಎಲ್‌ಎಕ್ಸ್‌ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಿದ್ದ. ಈ ಕಚೇರಿ ಮಾರಾಟಕ್ಕಿದೆ ಎಂದೂ ಉಲ್ಲೇಖಿಸಿದ್ದ. ಈ ವಿಷಯ ಗುರುವಾರ ನಮ್ಮ ಗಮನಕ್ಕೆ ಬಂದಿತ್ತು. ಕೂಡಲೇ ಭೇಲುಪುರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು’ ಎಂದು ವಾರಾಣಸಿಯ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಅಮಿತ್‌ ಪಾಠಕ್ ಮಾಹಿತಿ ನೀಡಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.