ಪ್ರಧಾನಿ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ

ನವದೆಹಲಿ, ಡಿ. 15: ಭೂ ಸುಧಾರಣಾ ಕಾಯ್ದೆಯಿಂದ ರೊಚ್ಚಿ ಗೆದ್ದ ರೈತ ಸಂಘಟನೆಗಳಿಂದ ತೀವ್ರ ವಿವಾದ ಸೃಷ್ಟಿಯಾಗಿದೆ. ತಿದ್ದು ಪಡಿ ಕಾಯಿದೆ ಪ್ರತಿಗಳನ್ನೂ ಸುಟ್ಟು ಹಾಕಲಾಗಿದೆ. ಈ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹೋರಾಟ ನಿಲ್ಲಿಸುವುದಿಲ್ಲವೆಂದೂ ರೈತರು ಪಟ್ಟು ಹಿಡಿದಿದ್ದಾರೆ.  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಮಸೂದೆ ವಿರೋಧಿಸಿ ರೈತರು ಪ್ರತಿಭಟನೆಗಳನ್ನು ನಡೆಸುತ್ತಿರುವ ಬೆನ್ನಲ್ಲೆ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.

ನಾಳೆ ಬೆಳಿಗ್ಗೆ 11. 25ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹಲವು ದಿನಗಳಿಂದಲೂ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಮಸೂದೆ ರದ್ದು ಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನೆ ನಡುವಲ್ಲೇ ಸಂಪುಟ ಸಭೆ ನಡೆಯುತ್ತಿರುವುದು ತೀವ್ರ ಕುತೂಹಲವನ್ನು ಮೂಡಿಸಿದೆ. ಮೋದಿಯವರು ಇದರ ಬಗ್ಗೆ ಇನ್ನೇನು ತೀರ್ಮಾನ ಕೈಗೊಳ್ಳುತ್ತಾರೋ ಎಂಬ ಕಾತರವಿದೆ ಜನರಲ್ಲಿ.

Exit mobile version