ಭಾರತ ದೇಶದಿಂದ ವೈದ್ಯಕೀಯ ಶಿಕ್ಷಣ ಪಡೆಯಲು ವಿದೇಶದ ನಾನಾ ಪ್ರದೇಶಗಳಿಗೆ ತೆರಳುವ 90 ರಷ್ಟು ವಿದ್ಯಾರ್ಥಿಗಳು ಭಾರತದಲ್ಲಿ ನಡೆಯುವ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವಲ್ಲಿ ವಿಫಲರಾದವರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನೇರವಾಗಿ ಹೇಳಿದ್ದಾರೆ. ಕಾನೂನಾತ್ಮಕವಾಗಿ ಹೊರ ದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಭಾರತಕ್ಕೆ ಬಂದು ವೈದ್ಯರಾಗಿ ಕೆಲಸ ನಿರ್ವಹಿಸಲು ವಿದೇಶಿ ವೈದ್ಯಕೀಯ ಪದವೀಧರರ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಎಂಬುದು ಕಡ್ಡಾಯ!

ಸದ್ಯ ವಿದೇಶಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಅದೆಷ್ಟೋ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾರೆ. ಇದೇ ರೀತಿ ಉಕ್ರೇನ್ ದೇಶದಲ್ಲಿ ಕೂಡ ಭಾರತೀಯ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಾರಣ ನೆಲೆಸಿದ್ದಾರೆ. ಈಗ ಭಾರತ ಅವರನ್ನು ವಾಪಾಸ್ ಕರೆದುಕೊಂಡು ಬರಲು ಹರಸಾಹಸ ಪಡುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಉಕ್ರೇನ್ ಪ್ರದೇಶದ ನಾನಾ ಭಾಗಗಳಲ್ಲಿ ಹೆಚ್ಚುವರಿಯಾಗಿ ಭಾರತೀಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಕಳೆದ 2-3 ದಿನದಿಂದ ಕೈವ್ ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಆಹಾರ, ನೀರು ಇಲ್ಲದೇ ಪರದಾಡುತ್ತಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುತ್ತೇವೆ. ಉಕ್ರೇನ್ ಮತ್ತು ರಷ್ಯಾ ಸರ್ಕಾರ ಜೊತೆಗೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ ಶೀಘ್ರವೇ ಉಳಿದ ಭಾರತೀಯ ವಿದ್ಯಾರ್ಥಿಗಳನ್ನು ವಾಪಾಸ್ ಕರೆತರುತ್ತೀವಿ ಎಂದು ಹೇಳಿದರು.