ಭೋಪಾಲ್ ಅ 19 : ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಕಾಳಿ ದೇವಾಲಯದ ಆವರಣದಲ್ಲಿ ಆಡಿದ್ದ ಕಬಡ್ಡಿ ಆಟದ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಮಾಡಿದಾತನನ್ನು ಪ್ರಜ್ಞಾ ಅವರು ರಾವಣ ಸಂಭೋದಿಸಿದ್ದಾರೆ.
ಭೋಪಾಲ್ ಸಂಸದೆ ಅನೇಕ ವರ್ಷಗಳನ್ನು ಗಾಲಿ ಕುರ್ಚಿಯ ಮೇಲೆ ಕಳೆದಿದ್ದರು. ಮಲೇಂಗಾವ್ ಸ್ಫೋಟ ಪ್ರಕರಣದಲ್ಲಿ ಠಾಕೂರ್ ಜೈಲುಪಾಲಾಗಿದ್ದರು. ಅನಾರೋಗ್ಯ ಕಾರಣದಿಂದ ಜಾಮೀನು ಪಡೆದುಕೊಂಡಿದ್ದರು. ಆದರೆ, ಇದೀಗ ಪ್ರಜ್ಞಾ ಠಾಕೂರ್ ಅವರು ಕಬಡ್ಡಿ ಆಡಿರುವ ವಿಡಿಯೋ ಹಲವರ ಟೀಕೆಗೆ ದಾರಿ ಮಾಡಿಕೊಟ್ಟಿದೆ.
ಸಿಂಧಿ ಸಮುದಾಯದ ಪ್ರಾಬಲ್ಯವಿರುವ ಭೋಪಾಲ್ನ ಸಂತ ನಗರ (ಬೈರಗರ್ಹ್)ದಲ್ಲಿ ಶುಕ್ರವಾರ ರಾತ್ರಿ ನಡೆದ ದಸರಾ ಕಾರ್ಯಕ್ರಮದಲ್ಲಿ ಠಾಕೂರ್ ಪಾಲ್ಗೊಂಡಿದ್ದರು.
ಪ್ರಜ್ಞಾ ಸಿಂಗ್ ಮಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಆದರೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಲಾಗಿತ್ತು. ಸಾಕಷ್ಟು ಸಮಯದಿಂದ ವ್ಹೀಲ್ ಚೇರ್ ಮೇಲೆ ಕುಳಿತೇ ಸಂಚರಿಸುತ್ತಿದ್ದರು. ಆದರೆ ಮೈದಾನದಲ್ಲಿ ಅವರು ಕಬಡ್ಡಿ ಆಡುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಠಾಕೂರ್ ಕಬಡ್ಡಿ ಆಡುತ್ತಿರುವ ವೀಡಿಯೋ ನೋಡಿದವರು ಆಶ್ಚರ್ಯ ಹೊರಹಾಕಿದ್ದಾರೆ. ಜೈಲು ವಾಸದಿಂದ ತಪ್ಪಿಸಿಕೊಳ್ಳಲು ಅವರು ಅನಾರೋಗ್ಯದ ಕಾರಣವೊಡ್ಡಿದ್ದಾರೆ. ವೈದ್ಯಕೀಯ ಕಾರಣ ನೀಡಿ ಜಾಮೀನು ಪಡೆದಿದ್ದ ಪ್ರಜ್ಞಾ ಸಿಂಗ್ ಠಾಕೂರ್ ಕಬಡ್ಡಿ ಆಡುವಷ್ಟು ದೈಹಿಕವಾಗಿ ಫಿಟ್ ಇದ್ದಾರೆ ಎಂದ ಮೇಲೆ ಜಾಮೀನು ಪಡೆದಿದ್ದೇಕೆ? ಎಂದು ನೆಟ್ಟಿಗರು ಟೀಕಿಸಿದ್ದಾರೆ