Bengaluru: ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ (Hassan Pendrive Case) ಸಂಬಂಧಿಸಿದಂತೆ (Prajwal Revanna Viral News) ಸಂತ್ರಸ್ತ ಮಹಿಳೆಯರ ವಿಡಿಯೋ ಹಾಗೂ ಫೋಟೋಗಳನ್ನು
ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಸ್ಮಿ ಚೌದರಿ ಅವರು ನಗರ ಪೋಲಿಸ್ ಆಯುಕ್ತರಿಗೆ
ಪಾತ್ರವನ್ನು ಬರೆದಿದ್ದಾರೆ. ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುತ್ತಿರುವ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತ್ರಸ್ತ ಮಹಿಳೆಯರ ಫೋಟೋ, ವಿಡಿಯೋಗಳನ್ನು
(Photo, Video) ಹರಿಯಬಿಡುತ್ತಿದ್ದಾರೆ. ಇದರಿಂದಾಗಿ ಕುಟುಂಬದಲ್ಲೂ ಸಮಸ್ಯೆ ಉಂಟಾಗುತ್ತಿದೆ ಹಾಗಾಗಿ ರಾಜ್ಯ ಮಹಿಳಾ ಆಯೋಗ ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಲ್ಲದೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ.
ಈಗಾಗಲೇ ಹಾಸನ ಪೆನ್ಡ್ರೈವ್ ಪ್ರಕರಣ ಸದ್ಯ ರಾಜ್ಯಾಧ್ಯಂತ ಭಾರೀ ಚರ್ಚೆಗೆ ಗ್ರಾಸವಾಗುತ್ತಿರುವ ಪ್ರಜ್ವಲ್ ರೇವಣ್ಣನವರ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದ್ದು. ಬಿ.ಕೆ ಸಿಂಗ್ (B K Singh)
ನೇತೃತ್ವದ ಎಸ್ಐಟಿ ತಂಡ ಪ್ರಕರಣದ ತನಿಖೆ ನಡೆಸುತ್ತಿದೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಂತ್ರಸ್ತ ಮಹಿಳೆಯರ ಫೋಟೋ ವಿಡಿಯೋಗಳನ್ನು ಹಂಚಲಾಗುತ್ತಿದ್ದು.
ಇದರಿಂದಾಗಿ ಮಹಿಳೆಯರ ಘನತೆಗೆ ಧಕ್ಕೆ ಉಂಟಾಗುವುದಲ್ಲದೆ ಕುಟುಂಬದಲ್ಲಿ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ.ಎಂದು ಈ ಬಗ್ಗೆ ಸಾಕಷ್ಟು ಮಹಿಳೆಯರು ಕೂಡಾ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
ಕೆಲವು ಕಿಡಿಗೇಡಿಗಳು ಪ್ರಕರಣದ ಸಂತ್ರಸ್ತ ಮಹಿಳೆಯರ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವ ಮೂಲಕ ಅನ್ಯಾಯಕ್ಕೊಳಗಾದ ಮಹಿಳೆಯರ ಘನತೆಗೆ ಕುಂದು ಉಂಟು
ಮಾಡುತ್ತಿದ್ದಾರೆ. ಇದರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರಿಗೆ ಪತ್ರವನ್ನು ಬರೆದಿದ್ದೇನೆ’ ಎಂದ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಸ್ಮಿ
ಚೌದರಿ (Dr. Nagalakshmi Choudhary)
ಸೂಕ್ತ ತನಿಖೆಯ ವಿಶ್ವಾಸ ಇದೆ
ಈಗಾಗಲೇ ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದ್ದು. ಎಸ್ಐಟಿ ರಚನೆ ಮಾಡಿ ಎರಡು ದಿನಗಳಷ್ಟೇ ಆಗಿದೆ. ತನಿಖಾ ತಂಡಕ್ಕೆ ಸಮಯಾವಕಾಶ ನೀಡಿ.
ಆರೋಪಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಿ ಎಂಬ ಭರವಸೆ ಇದೆ (Prajwal Revanna Viral News) ಎಂದು ಇದೇ ಸಂದರ್ಭದಲ್ಲಿ ನಾಗಲಕ್ಷ್ಮೀ ಚೌದರಿ ವಿಶ್ವಾಸ ವ್ಯಕ್ತಪಡಿಸಿದರು.
ಎಸ್ಐಟಿ ತನಿಖೆ: ಈಗಾಗಲೇ 18 ಸಿಬ್ಬಂದಿಯನ್ನು ನೇಮಕ ಮಾಡಿದ್ದು. ಸದ್ಯ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ತೆರಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಪ್ರಜ್ವಲ್ ರೇವಣ್ಣನಿಗೆ ನೋಟಿಸ್ ನೀಡುವ
ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ರಚನೆ ಆಗಿರುವುದರಿಂದ ನಾವು ಕಾದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಮುಂದೆ ಬರುವ ಸಂತ್ರಸ್ತ ಮಹಿಳೆಯರ ಗೌಪ್ಯತೆ
ಕಾಪಾಡೋದು, ತನಿಖೆಯಲ್ಲಿ ಭಾಗಿಯಾದಾಗ ರಕ್ಷಣೆ ಕೊಡಿಸುವುದು ಮಹಿಳಾ ಆಯೋಗದ ಜವಾಬ್ದಾರಿಯಾಗಿದೆ. ಈ ಭರವಸೆಯನ್ನು ನಾನು ಸಂತ್ರಸ್ತರಿಗೆ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಇದನ್ನು ಓದಿ: ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣ: ನಾವು ಸಂತ್ರಸ್ತ ಮಹಿಳೆಯರ ಪರವಾಗಿದ್ದೇವೆ, ಧೈರ್ಯವಾಗಿ ದೂರು ಕೊಡಿ-ಮಹಿಳಾ ಕಾಂಗ್ರೆಸ್
- ಮೇಘ ಮನೋಹರ ಕಂಪು