ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ : ಹೈಕೋರ್ಟ್ ಮಹತ್ವದ ಆದೇಶ

Bengaluru: ಚುನಾವಣಾ ಅಕ್ರಮ ಮತ್ತು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವ ಆರೋಪ ಸಾಭೀತಾಗಿರುವ ಹಿನ್ನಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ (JDS) ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿ ತೀರ್ಪು ನೀಡಿದೆ.

ನ್ಯಾಯಮೂರ್ತಿ ಕೆ. ನಟರಾಜನ್ (K Natarajan) ಅವರ ನೇತೃತ್ವದ ಏಕಸದಸ್ಯ ಹೈಕೋರ್ಟ್ (Highcourt) ಪೀಠ ಈ ಮಹತ್ದ ಆದೇಶವನ್ನು ನೀಡಿದ್ದು, ಇದರಿಂದಾಗಿ ಮುಂದಿನ ಆರು ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಿಲ್ಲ.

ಪ್ರಕರಣದ ಹಿನ್ನಲೆ : 2019ರ ಲೋಕಾಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಅವರು ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ತಮ್ಮ ಆದಾಯ ಮತ್ತು ಆಸ್ತಿಯ ಕುರಿತು ಸುಳ್ಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ ಸಂಸತ್ ಸದಸ್ಯತ್ವವನ್ನು ರದ್ದು ಮಾಡಬೇಕೆಂದು ಕೋರಿ ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಹಾಸನ ಬಿಜೆಪಿ ಅಭ್ಯರ್ಥಿ ಎ ಮಂಜು ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ತೀರ್ಪು ನೀಡಿದೆ.

ಪ್ರಜ್ವಲ್ ರೇವಣ್ಣ ಅವರು ಅಕ್ರಮವಾಗಿ ಸರ್ಕಾರಿ ಜಮೀನು ಖರೀದಿಸಿದ್ದಾರೆ, ಅನೇಕ ಕಡೆಗಳಲ್ಲಿ ಬೇನಾಮಿ ಆಸ್ತಿ ಗಳಿಸಿದ್ದಾರೆ. ಚೆನ್ನಾಂಬಿಕ ಕನ್ವೆನ್ಶನ್ ಸೆಂಟರ್ (Chennambika Convention Center) ಕನಿಷ್ಠ 5 ಕೋಟಿ ರೂಪಾಯಿ ಮೌಲ್ಯ ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು ಕೇವಲ 14 ಲಕ್ಷ ಎಂದು ತೋರಿಸಿ, ಸುಳ್ಳು ಮಾಹಿತಿ ನೀಡಿದ್ದಾರೆ. ಅದೇ ರೀತಿ ಅವರ ಕರ್ನಾಟಕ ಬ್ಯಾಂಕ್ (Karnataka Bank) ಖಾತೆಯಲ್ಲಿ 48 ಲಕ್ಷ ರೂಪಾಯಿ ಇದ್ದರೂ, ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

Exit mobile version