ನವದೆಹಲಿ, ಡಿ. 17: ಜೆಇಇ ಮೇನ್ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಇಂದು ಸಂಜೆ 4 ಗಂಟೆಗೆ ಮುಂಬರುವ ಸಿಬಿಎಸ್ಇ 10 ಮತ್ತು ಕ್ಲಾಸ್ 12 ಬೋರ್ಡ್ ಪರೀಕ್ಷೆಗಳ ದಿನಾಂಕದ ಬಗ್ಗೆ ಮಾತನಾಡಲಿದ್ದಾರೆ.
ಇಂದು ಸಂಜೆ ನಾಲ್ಕು ಗಂಟೆಗೆ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟರ್ ನಲ್ಲಿ ಲೈವ್ ಬರಲಿದ್ದು, ಆಸಕ್ತ ಶಿಕ್ಷಕರು ತಮ್ಮ ಪ್ರಶ್ನೆಗಳನ್ನು ಹಂಚಿಕೊಳ್ಳಬಹುದು ಮತ್ತು ಮುಂಬರುವ 10 ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳ ಬಗ್ಗೆ ಸಲಹೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಹುದು.
ಸಿಬಿಎಸ್ ಇ 10 ನೇ ತರಗತಿ ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆ ದಿನಾಂಕಗಳ ಬಗ್ಗೆ ಶಿಕ್ಷಣ ಸಚಿವರು ಪ್ರಕಟಣೆ ಯನ್ನು ನೀಡುವ ನಿರೀಕ್ಷೆಯಿದೆ.