ಕಲ್ಬುರ್ಗಿ ನ 24 : ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‌ಗಳನ್ನು ತೆರವುಗೊಳಿಸುವಂತೆ ಪ್ರಮೋದ್ ಮುತಾಲಿಕ್ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Kannada live news
ಕಲಬುರಗಿಯಲ್ಲಿ ಮಾತನಾಡಿದ ಅವರು, ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ ನಿಷೇಧ ಮಾಡಿ ಆದೇಶ ಹೊರಡಿಸಿ ಹಲವು ದಿನಗಳು ಕಳೆದಿವೆ. ಆದರೆ, ಸುಪ್ರೀಂ ಕೋರ್ಟ್ ಆದೇಶ ಇದುವರೆಗೆ ಪಾಲನೆ ಆಗುತ್ತಿಲ್ಲ. ಬೆಳ್ಳಂಬೆಳಗ್ಗೆ ಮಸೀದಿಗಳ ಮೇಲೆ ಮೈಕ್ ಶಬ್ದ ಶುರುವಾಗುತ್ತದೆ. ಇದು ನ್ಯಾಯಾಲಯ ಆದೇಶ ಉಲ್ಲಂಘನೆಯಾಗುತ್ತದೆ. ದಿನದ ಐದು ಬಾರಿ ಮಸೀದಗಳಲ್ಲಿನ ಪ್ರಾರ್ಥನೆ ಶಬ್ಧ ಕಿರಿಕಿರಿಯುಂಟಾಗುತ್ತಿದೆ ಎಂದರು.
ಈ ಬಗ್ಗೆ ಶ್ರೀರಾಮಸೇನೆ ಹೋರಾಟ ಶುರು ಮಾಡಲು ಅಣಿಯಾಗುತ್ತಿದೆ. ನಮಗೆ ಪ್ರಾರ್ಥನೆ ಮಾಡಲು ಅಭ್ಯಂತರವಿಲ್ಲ. ಆದರೆ, ಶಬ್ದಕ್ಕೆ ನಮ್ಮ ತಕರಾರು ಇದೆ. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ನಾವೇ ಮಸೀದಿಗಳ ಮೇಲಿನ ಮೈಕ್ ಕಿತ್ತು ಬಿಸಾಕುತ್ತೇವೆ. ಅನೇಕ ಮುಸ್ಲಿಂ ದೇಶಗಳಲ್ಲಿಯೇ ಮಸೀದಿಗಳ ಮೈಕ್ ತೆಗೆಯಲಾಗಿದೆ. ಆದರೆ, ಇಲ್ಲಿ ಮಾತ್ರ ಕಾನೂನು ಪಾಲನೆಯಾಗುತ್ತಿಲ್ಲ ಎಂದು ಕಿಡಿಕಾರಿದರು.
ಇನ್ನು ಮಾತಾಂತರ ಕಾಯ್ದೆ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ಪ್ರಕ್ರಿಯೆ ಹೆಚ್ಚಾಗಿದೆ ಎಂದು ಆರೋಪಿಸಿದ ಅವರು, 50 ಕ್ಕೂ ಅಧಿಕ ಮಠಾಧೀಶರ ನೇತೃತ್ವದಲ್ಲಿ ಸಿಎಂ ಭೇಟಿಯಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಆಗ್ರಹಿಸಿದ್ದೇವು. ಕಾನೂನು ಜಾರಿಗೆ ತರದಿದ್ದರೆ ಜನವರಿ ತಿಂಗಳಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಎಲ್ಲಾ ಕಡೆ ಕ್ರಿಶ್ಚಿಯನ್ ಸಮುದಾಯದವರು ತಮ್ಮ ತಂತ್ರಗಳನ್ನು ಉಪಯೋಗಿಸಿ ಮತಾಂತರ ಮಾಡುತ್ತಿದ್ದಾರೆ. ನಿಮ್ಮ ಪಾಡಿಗೆ ನೀವು ಚರ್ಚ್‌ನಲ್ಲಿ ಪ್ರಾರ್ಥನೆ ಮಾಡಿ, ಇಲ್ಲ ಅಂದ್ರೆ ಒದ್ದು ಓಡಿಸುತ್ತೇವೆ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.