Visit Channel

ಮುದ್ದು ಕಂದಮ್ಮನ ನಿರೀಕ್ಷೆಯಲ್ಲಿ ‘ಪೊರ್ಕಿ’ ನಟಿ!

pranitha subhash

ಖ್ಯಾತ ನಟಿ(Actress) ಪ್ರಣಿತಾ ಸುಭಾಷ್(Pranitha Subhash) ಅವರು ತಮ್ಮ ಆಪ್ತ ವಲಯ ಮತ್ತು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು ಇತ್ತೀಚಿನ ದಿನಗಳಲ್ಲಿ ಕುಟುಂಬದ ಕಡೆಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ಈಗ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದು, ತಾವು ತಾಯಿಯಾಗುತ್ತಿರೊ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಾವು ಪ್ರೆಗ್ನೆಂಟ್ ಎಂಬ ಸುದ್ದಿಯನ್ನು ಪ್ರಣಿತಾ ಸುಭಾಷ್ ತಿಳಿಸಿದ್ದಾರೆ.

actress

ಸಾಮಾಜಿಕ ಜಾಲತಾಣದಲ್ಲಿ ಪತಿ ಜೊತೆಗಿನ ಸ್ಪೆಷಲ್ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಮಗುವಿನ ಸ್ಕ್ಯಾನಿಂಗ್ ಚಿತ್ರವನ್ನು ಹಿಡಿದು ಪತಿಯೊಟ್ಟಿಗೆ ಖುಷಿಯಿಂದ ಸೆಲೆಬ್ರೇಟ್ ಮಾಡುತ್ತಿರುವ ಚಿತ್ರವನ್ನು ಪ್ರಣಿತಾ ಸುಭಾಶ್ ಹಂಚಿಕೊಂಡಿದ್ದಾರೆ. ‘ನನ್ನ ಪತಿಯ 34ನೇ ವರ್ಷದ ಜನ್ಮದಿನಕ್ಕೆ ಏಂಜೆಲ್ಗಳು ನಮಗೆ ಉಡುಗೊರೆ ನೀಡಲಿವೆ’ ಎಂದು ಅವರು ಕ್ಯಾಪ್ಷನ್ ನೀಡಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ಸ್ನೇಹಿತರು ಪ್ರಣಿತಾ ಸುಭಾಷ್ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ಈ ಪೋಸ್ಟ್ಗೆ ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. 2021ರ ಮೇ ತಿಂಗಳಲ್ಲಿ ಉದ್ಯಮಿ ನಿತಿನ್ ರಾಜು ಜೊತೆ ಪ್ರಣಿತಾ ಹಸೆಮಣೆ ಏರಿದರು. ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಕೇವಲ ಆಪ್ತರ ಸಮ್ಮುಖದಲ್ಲಿ ಅವರ ಮದುವೆ ಸಮಾರಂಭ ನಡೆದಿತ್ತು. 2010ರಿಂದಲೂ ಪ್ರಣಿತಾ ಸುಭಾಷ್ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು, ‘ಪೊರ್ಕಿ’ ಸಿನಿಮಾ ಮೂಲಕ ಅವರು ಕನ್ನಡಚಿತ್ರರಂಗಕ್ಕೆ ಕಾಲಿಟ್ಟರು. ಪೊರ್ಕಿ ಸಿನಿಮಾದಲ್ಲಿ ಸದ್ದು ಮಾಡಿದ ನಟಿ, ಮತ್ತಷ್ಟು ಕನ್ನಡ ಸಿನಿಮಾದಲ್ಲಿ ನಟಿಸಿದರು. ಅನೇಕ ಸ್ಟಾರ್ ಹೀರೋಗಳ ಜೊತೆಗೆ ಅವರು ತೆರೆ ಹಂಚಿಕೊಂಡಿದ್ದಾರೆ.

pranitha

ಮದುವೆಯಾದ ಮೇಲೆಯೂ ಸಿನಿಮಾಗಳಲ್ಲಿ ನಟಿಸುತ್ತಿರುವ ಪ್ರಣಿತಾ, ಸಾಮಾಜಿಕ ಕಾರ್ಯಗಳಲ್ಲಿಯೂ ತಮ್ಮನ್ನು ತಾವು ತೊಡಗಿಕೊಂಡಿದ್ದಾರೆ. ಪ್ರಣಿತಾ ಫೌಂಡೇಶನ್ ಮೂಲಕ ಹಲವು ಸಾಮಾಜಿಕ ಕಾರ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.
ದರ್ಶನ್ ಜೊತೆಗೆ ಕನ್ನಡದ ‘ಪೊರ್ಕಿ’ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ ಈ ಬೆಡಗಿ, ತದನಂತರ ಹಲವು ಸಿನಿಮಾಗಳಲ್ಲಿ ನಟಿಸಿದರು. ತೆಲುಗು, ತಮಿಳು ಸಿನಿಮಾಗಳಲ್ಲಿ ಮಾತ್ರ ನಟಿಸದೆ, ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಈಗ ಕನ್ನಡದ ‘ರಾಮನ ಅವತಾರ’ ಸಿನಿಮಾದಲ್ಲಿ ಪ್ರಣಿತಾ ನಟಿಸುತ್ತಿದ್ದಾರೆ.

  • ಪವಿತ್ರ ಸಚಿನ್

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.