ಸಿಬಿಐಗೆ ಹಂಗಾಮಿ ನಿರ್ದೇಶಕರಾಗಿ ಎಂ. ನಾಗೇಶ್ವರ್ ರಾವ್ ನೇಮಕ ಕುರಿತು ಸುಪ್ರೀಂಕೋರ್ಟ್ ವಿರುದ್ಧ ಆಕ್ಷೇಪಾರ್ಹ ಟ್ವೀಟ್ಗಳನ್ನು ಮಾಡಿದ್ದ ಅಡ್ವೋಕೇಟ್ ಪ್ರಶಾಂತ್ ಭೂಷಣ್ ಅವರನ್ನು ದೋಷಿ ಎಂದು ಪರಿಗಣಿಸಿದ ಸುಪ್ರೀಂ ಕೋರ್ಟ್ ಸೋಮವಾರ ಒಂದು ರೂಪಾಯಿ ದಂಡ ವಿಧಿಸಿದೆ.
ಪ್ರಶಾಂತ್ ಭೂಷಣ್ ಅವರು ಜೂನ್ 29 ರಂದು ಮಾಡಿದ್ದ ಎರಡು ಟ್ವೀಟ್ಗಳ ಕಾರಣಕ್ಕೆ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಆಗಸ್ಟ್ 14ರಂದು ಭೂಷಣ್ ತಪ್ಪಿತಸ್ಥ ಎಂದು ಘೋಷಿಸಿತ್ತು. ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಎಸ್.ಎ. ಬೋಬ್ಡೆ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಟೀಕಿಸಿ ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ ವಿವಾದವನ್ನ ಮೈಮೇಲೆ ಎಳೆದುಕೊಂಡಿದ್ದರು.ಈ ಸಂಬಂಧ ಸ್ವಯಂಪ್ರೇರಿತ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಪೀಠ ಆಗಸ್ಟ್ 14ರಂದು ಅಪರಾಧಿ ಎಂಬುದಾಗಿ ತೀರ್ಪು ನೀಡಿತ್ತು.