ಭಗತ್ ಸಿಂಗ್ ಅವರ ಪಠ್ಯವನ್ನು ಕೈಬಿಟ್ಟಿಲ್ಲ : ಪ್ರತಾಪ್ ಸಿಂಹ!

prathap simha

ಮೈಸೂರು : 2022-23ನೇ ಸಾಲಿನ ನೂತನ ಶೈಕ್ಷಣಿಕ ಪಠ್ಯಪುಸ್ತಕದಿಂದ ಭಗತ್ ಸಿಂಗ್(Bhagat Singh) ಮತ್ತು ಶ್ರೀ ನಾರಾಯಣಗುರು(Sri Narayana Guru) ಅವರ ಪಠ್ಯವನ್ನ ಕೈ ಬಿಟ್ಟಿಲ್ಲ.

ಅನಗತ್ಯವಾಗಿ ಕಾಂಗ್ರೆಸ್(Congress) ಈ ವಿಚಾರದಲ್ಲಿ ವಿವಾದ ಸೃಷ್ಟಿಸುತ್ತಿದೆ ಎಂದು ಮೈಸೂರು-ಕೊಡಗು(Mysuru-Kodagu) ಸಂಸದ(MP) ಪ್ರತಾಪ್ ಸಿಂಹ(Prathap Simha) ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ನೂತನ ಶೈಕ್ಷಣಿಕ ಪಠ್ಯಪುಸ್ತಕದ ವಿರುದ್ದ ಕಾಂಗ್ರೆಸ್ ವಿನಾಕಾರಣ ಈ ವಿಚಾರದಲ್ಲಿ ವಿವಾದ ಮಾಡುತ್ತಿದೆ.

ಅಚ್ಚರಿ ಎಂದರೆ ಕಾಂಗ್ರೆಸ್‍ಗೆ ದಿಢೀರನೇ ಭಗತ್ ಸಿಂಗ್ ಮೇಲೆ ಯಾಕೆ ಇಷ್ಟೊಂದು ಪ್ರೀತಿ ಬಂತು ಅನ್ನೊದು ಗೊತ್ತಾಗುತ್ತಿಲ್ಲ. ಇನ್ನು ನೂತನ ಶೈಕ್ಷಣಿಕ ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್ ಪಠ್ಯ ಮುಂದುವರೆದಿದ್ದರೆ, ಶ್ರೀ ನಾರಾಯಣಗುರು ಅವರ ಪಠ್ಯ ಒಂದು ವಿಷಯದಿಂದ ಮತ್ತೊಂದು ವಿಷಯಕ್ಕೆ ವರ್ಗಾವಣೆಯಾಗಿದೆ. ಈ ಬಗ್ಗೆ ಸರಿಯಾದ ಮಾಹಿತಿಯಿಲ್ಲದ ಕಾಂಗ್ರೆಸ್ ನಾಯಕರು ಈ ವಿಚಾರದಲ್ಲಿ ಸುಳ್ಳು ಹೇಳುತ್ತಿದ್ದಾರೆ ಎಂದರು.

ಇನ್ನು ಇದೇ ಸಂದರ್ಭದಲ್ಲಿ ಶೈಕ್ಷಣಿಕ ಪಠ್ಯಪುಸ್ತಕದಲ್ಲಿ ಆರ್‍ಎಸ್‍ಎಸ್ ಸಂಸ್ಥಾಪಕರಾದ ಹೆಡಗೇವಾರ್ ಅವರ ಭಾಷಣ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹೆಡಗೇವಾರ್ ಅವರು ದೇಶ ಪ್ರೇಮದ ಬಗ್ಗೆ ಮಾಡಿದ ಭಾಷಣ ಮಕ್ಕಳಿಗೆ ಸ್ಪೂರ್ತಿಯಾಗಲು ಪಠ್ಯದಲ್ಲಿ ಅಳವಡಿಸಿದ್ದೇವೆ. ಅದರಲ್ಲಿ ತಪ್ಪೇನಿದೆ? ದೇಶಕ್ಕಾಗಿ ಸಾಕಷ್ಟು ಕೆಲಸ ಮಾಡಿರುವ ಆರ್‍ಎಸ್‍ಎಸ್ ಸಂಸ್ಥಾಪಕ ಹೆಡಗೇವಾರ್ ಅವರ ಪಠ್ಯ ಯಾಕೆ ಇರಬಾರದು? ಎಂದು ಪ್ರಶ್ನಿಸಿದರು.

ಅದೇ ರೀತಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ “ತಾಯಿ ಭಾರತೀಯ ಅಮರ ಪುತ್ರರು” ಎಂಬ ಪಠ್ಯ ಸೇರ್ಪಡೆ ಕುರಿತು ಮಾತನಾಡಿ, ಚಕ್ರವರ್ತಿ ಸೂಲಿಬೆಲೆ ಅವರು ಒಬ್ಬ ಶ್ರೇಷ್ಠ ವಾಗ್ಮಿ. ಅವರು ರಚಿಸಿದ ಪಠ್ಯ ಮಕ್ಕಳಿಗೆ ದೇಶಪ್ರೇಮ ತುಂಬಲಿದೆ. ‘ತಾಯಿ ಭಾರತೀಯ ಅಮರ ಪುತ್ರರು’ ಎಂಬ ಪಠ್ಯ ಮಕ್ಕಳಲ್ಲಿ ದೇಶ ಪ್ರೇಮ ಬೆಳಸಲಿದೆ. ಇದರಲ್ಲೂ ಕಾಂಗ್ರೆಸ್‍ನವ್ರು ತಪ್ಪು ಹುಡುಕುತ್ತಾರೆ.

ಬೋಲೋ ಭಾರತ್ ಮಾತಕೀ ಜೈ ಅನ್ನೊದಕ್ಕು ಕಾಂಗ್ರೆಸ್ಗೆ ಸಮಸ್ಯೆ ಇದೆ. ದೇಶಪ್ರೇಮದ ಪಾಠ ಭೋದಿಸುವುದು ಕಾಂಗ್ರೆಸ್ಗೆ ಸಮಸ್ಯೆ ಇದೆ. ಕಾಂಗ್ರೆಸ್ ಯಾವಾಗಲೂ ದೇಶ ವಿರೋಧಿಯಾಗಿಯೇ ವರ್ತಿಸುತ್ತಿದೆ ಎಂದರು.

Exit mobile version