Breaking News
ರೈತರ ಹೆಸರಲ್ಲಿ ರಾಜಕೀಯ ಪುಂಡಾಟ,ದಾಂಧಲೆ ಮಾಡುವುದು ಸರಿಯಲ್ಲ: ನಳಿನ್ ಕುಮಾರ್ ಕಟೀಲ್ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು: ಸಿದ್ದರಾಮಯ್ಯ72ನೇ ಗಣರಾಜ್ಯೋತ್ಸವ – ರಾಜ್​ಪಥ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಕೋವಿಂದ್ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರೊಟೆಸ್ಟ್: ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಟ್ರ್ಯಾಕ್ಟರ್ ಪೆರೇಡ್2021ನೇ ಸಾಲಿನ “ಪದ್ಮ‌ ಪ್ರಶಸ್ತಿ” ಪ್ರಕಟ: ಕರ್ನಾಟಕದ ಐವರು ಸೇರಿದಂತೆ 119 ಮಂದಿಗೆ ಗೌರವ`ಡೆನ್ವರ್‌’ಗೆ ಈಗ ಸುದೀಪ್ ರಾಯಭಾರಿಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ಗೆ ಅನುಮತಿ ಇಲ್ಲ: ಕಮಲ್ ಪಂತ್ಮತ್ತೆ ಕೆ ಸುಧಾಕರ್ ಗೆ ಆರೋಗ್ಯ ಇಲಾಖೆ ಹೊಣೆಭಾರತದ ಗಡಿಗೆ ನುಸುಳಿದ ಚೀನಾ ಸೈನಿಕರು – ದಾಳಿಗೆ 20 ಸೈನಿಕರು ಗಾಯನನಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಕೊಟ್ಟರೆ ನಿಭಾಯಿಸುತ್ತೇನೆ: ಎಂಟಿಬಿ ನಾಗರಾಜ್

ಪ್ರತಿಭಟನೆ ನಡೆಸಲು ಮುಂದಾದ ಪೋಷಕರನ್ನು ವಶಕ್ಕೆ ಪಡೆದುಕೊಂಡ ಪೋಲೀಸರು

Share on facebook
Share on google
Share on twitter
Share on linkedin
Share on print

ಬೆಂಗಳೂರು, ಜ. 12: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ಪೋಷಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಖಾಸಗಿ ಶಾಲೆಯ ಫೀಸ್ ಸ್ಟçಕ್ಚರ್, ಶಾಲೆಗಳಿಗೆ ಮಕ್ಕಳನ್ನ್ನು ಕಳುಹಿಸುವ ವಿರುದ್ಧ ಪೋಷಕರು ವಿಭಿನ್ನವಾಗಿ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಇಂದು ಬೆಳಗ್ಗೆ 6 ಗಂಟೆಗೆ ಸಚಿವರ ನಿವಾಸದ ಎದುರು ಜಮಾಯಿಸಿದ್ದ ಪೋಷಕರು ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು.

ಈ ವೇಳೆ ಬ್ಯಾಡರಹಳ್ಳಿ ಪೊಲೀಸರು, ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಹೇಳಿದ್ದಾರೆ. ಆದರೂ ಪೋಷಕರು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ 20ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಯಾವುದೇ ಪ್ರತಿಭಟನೆ ನಡೆಸದಂತೆ ಮನವಿ ಮಾಡಿ ಅವರನ್ನೆಲ್ಲ ಬಿಟ್ಟು ಕಳುಹಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಪೋಷಕರು, ನಾವು ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದರು ಸಹ ಅದಕ್ಕೆ ಅವಕಾಶ ನೀಡದೆ ತಡೆದಿದ್ದಾರೆ. ನಮ್ಮನ್ನು ವಶಕ್ಕೆ ಪಡೆದು ಪ್ರತಿಭಟನೆ ನಡೆಸದಂತೆ ಮಾಡಿದ್ದಾರೆ. ಸಚಿವರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದರು ಎಂದು ತಿಳಿಸಿದ್ದಾರೆ.

Submit Your Article